ಬೆಂಗಳೂರು:ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಇದನ್ನು ಎದುರಿಸಲು ಸರ್ಕಾರ ಸಹ ಸಜ್ಜಾಗಿದೆ.
ಕೋವಿಡ್ ಪ್ರಕರಣಗಳ ಹೆಚ್ಚಳ ಆತಂಕ ತರಿಸುತ್ತಿರುವ ಹಿನ್ನಲೆ ಸರ್ಕಾರ ಖಾಸಗಿ ಆಸ್ಪತ್ರೆ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸಿಗೆಗಳನ್ನ ಹಂತ ಹಂತವಾಗಿ ಕೋವಿಡ್-19 ಚಿಕಿತ್ಸೆಗೆ ಮೀಸಲು ಮಾಡಿ ಆದೇಶ ಹೊರಡಿಸಿದೆ.
ತಕ್ಷಣಕ್ಕೆ ಜಾರಿಗೆ ಬರುವಂತೆ ಶೇಕಡ 30ರಷ್ಟು ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿನ ಬೆಡ್ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲು ಮಾಡಿದೆ. ಈ ಹಾಸಿಗಳನ್ನ ಸಾರ್ವಜನಿಕ ಆರೋಗ್ಯ ಇಲಾಖೆ ಸೂಚಿಸುವ ಮಾಡುವ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.