ಕರ್ನಾಟಕ

karnataka

ETV Bharat / city

ವಿದ್ಯಾರ್ಥಿಗಳ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸಲು ಎಬಿವಿಪಿ ಆಗ್ರಹ - ವಿದ್ಯಾರ್ಥಿ ವೇತನವನ್ನು ಬಿಡುಗಡೆ

ಮನೆಯಲ್ಲಿ ಕಷ್ಟದ ವಾತಾವರಣ ಸಂದರ್ಭದಲ್ಲಿ ಹಾಸ್ಟೆಲ್​ಗಳು ತೆರೆಯದಿರುವುದು ಮತ್ತು ವಿದ್ಯಾರ್ಥಿ ವೇತನ ದೊರೆಯದಿರುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ತಕ್ಷಣ ಸರ್ಕಾರ ಅರ್ಜಿ ಹಾಕಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕಾಗಿ ಆಗ್ರಹಿಸಿದರು.

government-response-of-students-problems-news
ಎಬಿವಿಪಿಯಿಂದ ಪ್ರತಿಭಟನೆಗೆ ಕರೆ

By

Published : Jan 21, 2021, 5:13 PM IST

ಬೆಂಗಳೂರು:ರಾಜ್ಯದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳಿಗೆ ಸರ್ಕಾರ ತಕ್ಷಣವೇ ಸ್ಪಂದಿಸಬೇಕೆಂದು ಆಗ್ರಹಿಸಿ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಈ ಸಂಬಂಧ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಎಬಿವಿಪಿಯಿಂದ ಪ್ರತಿಭಟನೆ

ಓದಿ: ಗೋಕರ್ಣ ಬೀಚ್​ನಲ್ಲಿ ಅಲೆಗಳಿಗೆ ಕೊಚ್ಚಿ ಹೋಗಿದ್ದ ಮೂವರು ಸಾವು: ಇಬ್ಬರ ರಕ್ಷಣೆ

ಕೊರೊನಾ ಮಹಾಮಾರಿಯಿಂದ ಇಡೀ ಜಗತ್ತೇ ತಲ್ಲಣಗೊಂಡು ಜನಜೀವನ ಅಸಹಜ ಸ್ಥಿತಿ ಎದುರಿಸಬೇಕಾಯಿತು. ಈ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ನಿಂತಿದ್ದವು. ಇತ್ತೀಚೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಿ ಮತ್ತೆ ಪುನಃ ಶೈಕ್ಷಣಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆಹರಿಸಬೇಕೆಂದು ಎಬಿವಿಪಿ ಆಗ್ರಹಿಸಿತು.

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ರಾಜ್ಯದ ಬಡ-ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಹಾಗೂ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣಕ್ಕೆ ಪ್ರೋತ್ಸಾಹ ಕೊಡುವ ದೃಷ್ಟಿಯಿಂದ ಸರ್ಕಾರವು ನೀಡುತ್ತಿದ್ದ ಕೆಲವು ವಿದ್ಯಾರ್ಥಿ ವೇತನಗಳು ಕೊರೊನಾ ಸಮಯದಲ್ಲಿ ತಲುಪದಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದರು.

ಮನೆಯಲ್ಲಿ ಕಷ್ಟದ ವಾತಾವರಣ ಸಂದರ್ಭದಲ್ಲಿ ಹಾಸ್ಟೆಲ್​ಗಳು ತೆರೆಯದಿರುವುದು ಮತ್ತು ವಿದ್ಯಾರ್ಥಿ ವೇತನ ದೊರೆಯದಿರುವುದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ತಕ್ಷಣ ಸರ್ಕಾರ ಅರ್ಜಿ ಹಾಕಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕಾಗಿ ಆಗ್ರಹಿಸಿದರು.

ಹಾಸ್ಟೆಲ್‌ಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೆ ತೆರೆಯಿರಿ. ಅನೇಕ ತಿಂಗಳ ನಂತರ ತರಗತಿಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳೂ ತಮ್ಮ ಊರುಗಳಿಂದ ತರಗತಿಗಳಿಗೆ ಹಾಜರಾಗಲು ಕಾಲೇಜುಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತೆ ಹಾಸ್ಟೆಲ್ ತೆರೆದಿದ್ದು, ಉಳಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳಲ್ಲಿ ವಸತಿ ಕಲ್ಪಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ನೇಮಕಾತಿ ಅವಶ್ಯಕ. ಅನೇಕ ಕಾಲೇಜುಗಳಲ್ಲಿ ಕೆಲವು ವಿಷಯಗಳಿಗೆ ಕಾಯಂ ಉಪನ್ಯಾಸಕರು ಇರುವುದಿಲ್ಲ. ಪ್ರಸ್ತುತ ಕಾಲೇಜುಗಳು ಪ್ರಾರಂಭವಾಗಿ ವಿದ್ಯಾರ್ಥಿಗಳು ತರಗತಿಗಳಿಗೆ ಬರುತ್ತಿರುವ ಈ ಹೊತ್ತಿನಲ್ಲಿ ಅನೇಕ ವಿಷಯಗಳಿಗೆ ಉಪನ್ಯಾಸಕರೇ ಇಲ್ಲದೆ ತರಗತಿಗಳು ನಡೆಯದಿರುವುದು ವಿಪರ್ಯಾಸ. ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರನ್ನು ನೇಮಿಸಲು ಆದೇಶಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಎಲ್ಲಾ ತರಗತಿಗಳು ನಡೆಸುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ವರ್ಷದ 12 ತಿಂಗಳುಗಳ ಕಾಲ ವೇತನ ನೀಡಬೇಕು. ಒಟ್ಟಾರೆ ರಾಜ್ಯ ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯು ತರಗತಿಗಳು ಸರಿಯಾಗಿ ನಡೆಸಲು ವಿದ್ಯಾರ್ಥಿಗಳ ಕಷ್ಟಗಳಿಗೆ ಸ್ಪಂದಿಸಿ ಕೋವಿಡ್-19ರ ನಿಯಮಾವಳಿ ಪಾಲನೆಗೆ ಬೇಕಾದ ಕ್ರಮಗಳ ಬಗ್ಗೆ ನಿಗಾವಹಿಬೇಕಾಗಿ ಒತ್ತಾಯಿಸಿದರು.

ABOUT THE AUTHOR

...view details