ಬೆಂಗಳೂರು: ವಲಸೆ ಹಾಗೂ ಕೂಲಿ ಕಾರ್ಮಿಕರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದೊಳಗೆ ಜಿಲ್ಲೆಯಿಂದ ಜಿಲ್ಲೆಗೆ ವಲಸೆ-ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ಸರ್ಕಾರ ಅನುಮತಿ! - ವಲಸೆ ಕಾರ್ಮಿಕರಿಗೆ ಅಂತರ ಜಿಲ್ಲೆಗೆ ಹೋಗಲು ಅನುಮತಿ
ಕೇಂದ್ರ ಸರ್ಕಾರ ಏಪ್ರಿಲ್ 19ರಂದು ವಲಸೆ ಕಾರ್ಮಿಕರಿಗೆ ಅಂತರ್ ಜಿಲ್ಲೆಗೆ ಹೋಗಲು ಅನುಮತಿ ನೀಡಿತ್ತು. ಅದರಂತೆ ಇದೀಗ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ವಲಸೆ, ಕೂಲಿ ಕಾರ್ಮಿಕರನ್ನು ಸ್ಥಳಾಂತರಿಸಲು ಅನುಮತಿ ನೀಡಿದೆ.
ಕೇಂದ್ರ ಸರ್ಕಾರ ಏಪ್ರಿಲ್ 19ರಂದು ವಲಸೆ ಕಾರ್ಮಿಕರಿಗೆ ಅಂತರ್ ಜಿಲ್ಲೆಗೆ ಹೋಗಲು ಅನುಮತಿ ನೀಡಿತ್ತು. ಅದರಂತೆ ಇದೀಗ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಅವರನ್ನು ರಾಜ್ಯದೊಳಗೆ ಸ್ಥಳಾಂತರಿಸಲು ಅನುಮತಿ ನೀಡಿದೆ. ಈಗಾಗಲೇ ಹಲವು ವಲಸೆ ಮತ್ತು ಕೂಲಿ ಕಾರ್ಮಿಕರು ಕೃಷಿ ಕೆಲಸಕ್ಕಾಗಿ ತಮ್ಮ ಗ್ರಾಮಗಳಿಗೆ ಹಿಂತಿರುಗಲು ಮತ್ತು ಕಟ್ಟಡ ಕಾಮಗಾರಿ ಹಿನ್ನೆಲೆ ನಗರಗಳಿಗೆ ಹೋಗಲು ಬಯಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ವಲಸೆ ಮತ್ತು ದಿನಗೂಲಿ ಕಾರ್ಮಿಕರನ್ನು ಸ್ಥಳಾಂತರಿಸಲು ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದಾರೆ.
ಕಾರ್ಮಿಕರ ಸ್ಥಳಾಂತರಕ್ಕೆ ಕೆಎಸ್ಆರ್ಟಿಸಿ ಬಸ್ ಬಳಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್ಗಳಲ್ಲಿ ಕೇವಲ 40% ಕಾರ್ಮಿಕರನ್ನು ಕೊಂಡೊಯ್ಯಲು ಮಾತ್ರ ಅವಕಾಶ ನೀಡಬೇಕು. ಅವರಿಗೆ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್ಗಳನ್ನು ನೀಡಬೇಕು. ಸ್ಥಳಾಂತರ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ.