ಕರ್ನಾಟಕ

karnataka

ETV Bharat / city

ಸರ್ಕಾರಿ ಶಾಲೆಯಲ್ಲಿ ಹೊಸ ಪ್ರಯೋಗ.. ಮೊದಲ ಬಾರಿಗೆ ಪಾಠ ಮಾಡಲು ಬಂದ ರೋಬೋ ಮೇಡಂ

ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಈಗಲ್ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ನಡೆಯಿತು. ನಂತರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

government school robot class Demonstration
ಮಲ್ಲೇಶ್ವರಂ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಈಗಲ್ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ನಡೆಯಿತು

By

Published : Mar 23, 2022, 10:47 PM IST

ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ ವಿದ್ಯಾರ್ಥಿಗಳಿಗೂ ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ "ಈಗಲ್ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ"ಯು ಬುಧವಾರ ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಮಲ್ಲೇಶ್ವರಂ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಈಗಲ್ ರೋಬೋ ಪರೀಕ್ಷಾರ್ಥ ಪ್ರಾತ್ಯಕ್ಷಿಕೆ ನಡೆಯಿತು

ಶಾಲೆಯ ಬೋಧಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ರೋಬೊಗೆ ಹಲವು ಪ್ರಶ್ನೆಗಳನ್ನು ವಿದ್ಯಾರ್ಥಿನಿಯರು ಕೇಳಿದರು. ನಂತರ ಮಾತನಾಡಿದ ಸಚಿವರು, ಇದು ಪ್ರಾಯೋಗಿಕ ಕಾರ್ಯಕ್ರಮವಾಗಿದ್ದು, ರೋಬೋದ ಕಾರ್ಯ ಸಾಮರ್ಥ್ಯವನ್ನು ವೀಕ್ಷಿಸಲಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆಯ ಸಲುವಾಗಿ, ಇಂತಹ ರೋಬೋಗಳು ಇದ್ದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ರೋಬೊ‌ ಶಿಕ್ಷಕರಿಗೆ ಪರ್ಯಾಯ ಅಲ್ಲ. ಆದರೆ ಶಿಕ್ಷಕರಿಗೆ ಬೋಧನೆಯಲ್ಲಿ ಸಹಕರಿಸುವ ಕೆಲಸ ಮಾಡಲಿದೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಮಟ್ಟ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು. 21ನೇ ಶತಮಾನವು ತಂತ್ರಜ್ಞಾನದ ಯುಗವಾಗಿದ್ದು, ಬೋಧನೆಯಲ್ಲಿ ಇದರ ಅಳವಡಿಕೆ ಅಗತ್ಯವಾಗಿದೆ. ಇದರಿಂದಾಗಿ, ಸರ್ಕಾರಿ ಶಾಲಾ ಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ "ಈಗಲ್" ರೋಬೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ತೋರಿಸಲಾಗುವುದು. ನಂತರ ಅವರಿಂದಲೇ ಈ ಯೋಜನೆಗೆ ಚಾಲನೆ‌ ಕೊಡಿಸುವ ಉದ್ದೇಶ ಇದೆ. ಮಲ್ಲೇಶ್ವರಂ ಕ್ಷೇತ್ರದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇದನ್ನು ಜಾರಿ ಮಾಡುವ ಉದ್ದೇಶ ಇದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಇಂಡಸ್ ಟ್ರಸ್ಟ್ ನ ಸ್ಥಾಪಕ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ಲೆ.ಜನರಲ್ ಅರ್ಜುನ್ ರಾಯ್, ಮಲ್ಲೇಶ್ವರ ಬಿಇಒ ಉಮಾದೇವಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ರವಿ, ಶಾಲೆ ಉಪ ಪ್ರಾಂಶುಪಾಲ ರವಿಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ.. ಸಿಎಂ ಬೊಮ್ಮಾಯಿ ಸ್ಪಷ್ಟನೆ

ABOUT THE AUTHOR

...view details