ಕರ್ನಾಟಕ

karnataka

ETV Bharat / city

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಒಪ್ಪಿಗೆ - Bangalore News

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ.

Governor approves labor law amendment
ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಒಪ್ಪಿಗೆ..!

By

Published : Jul 31, 2020, 11:46 PM IST

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ, ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ.

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಒಪ್ಪಿಗೆ..!

ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ಕಾಯ್ದೆಯ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು. ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಖಾನೆ ಮಾಲೀಕರ ನಡುವಿನ ವ್ಯಾಜ್ಯಗಳನ್ನು ಕಡಿಮೆ ಮಾಡಿ, ಸುಗಮ ಆಡಳಿತ ನಡೆಸಲು ಅನುಕೂಲವಾಗುಂತೆ ಕೈಗಾರಿಕೆಗಳ ವಿವಾದಗಳ ಅಧಿನಿಯಮ 1947, ಕಾರ್ಖಾನೆಗಳ ಅಧಿನಿಯಮ 1948, ಗುತ್ತಿಗೆ ಕಾರ್ಮಿಕರ ಅಧಿನಿಯಮ 1970ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಮಾಲೀಕರು ಉತ್ತರ ಪ್ರದೇಶದ ಮಾದರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರ ಕೂಡ ಕಾರ್ಮಿಕ ಖಾಯ್ದೆಗೆ ತಿದ್ದುಪಡಿ ತರುವಂತೆ ಸೂಚಿಸಿತ್ತು. ಅದರಂತೆ ರಾಜ್ಯಸರ್ಕಾರ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿದೆ.

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಒಪ್ಪಿಗೆ..!

ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ, ವಿದ್ಯುತ್ ಸೌಲಭ್ಯದ ಜೊತೆಗೆ ಕನಿಷ್ಠ 10 ಕಾರ್ಮಿಕರಿರುವ ಕಾರ್ಖಾನೆಯ ಬದಲು 20 ಕಾರ್ಮಿಕರಿರುವುದನ್ನು ಕಾರ್ಖಾನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಸದ್ಯ ಇರುವ ಕಾಯ್ದೆ ಪ್ರಕಾರ ನೂರಕ್ಕೂ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆ ಮುಚ್ಚುವುದಾದರೆ, ಸರ್ಕಾರದ ಅನುಮತಿ ಪಡೆಯಬೇಕು. ಈ ಮಿತಿಯನ್ನು 100 ರಿಂದ 300ಕ್ಕೆ ಹೆಚ್ಚಳ ಮಾಡಲಾಗಿದೆ. ಇನ್ನು ಹೆಚ್ಚುವರಿ ಕೆಲಸದ ಅವಧಿಯನ್ನು 75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇನ್ನು. ಟೌನ್ ಆ್ಯಂಡ್ ಕಂಟ್ರಿ ಪ್ಲ್ಯಾನಿಂಗ್ ಕಾಯ್ದೆಗೂ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದೆ. ಕಾಯ್ದೆಗೆ 18 ಬಿಯನ್ನು ಹೊಸದಾಗಿ ಸೇರಿಸಲಾಗಿದ್ದು, ಮೆಟ್ರೊ ಮಾರ್ಗದ ಎರಡೂ ಬದಿಗೆ ಫ್ರಿಮಿಯಂ ಎಫ್ಎಆರ್ ದರವನ್ನು ನಿಗದಿ ಪಡಿಸಲು ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಈ ರೀತಿಯ ಮಾದರಿ ಮುಂಬೈನಲ್ಲಿದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ತಿದ್ದುಪಡಿ ಮಾಡಿದ್ದು, ಈ ಕಾಯ್ದೆಗೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ABOUT THE AUTHOR

...view details