ಸಚಿವ ಸಿ.ಟಿ.ರವಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ - .ಟಿ.ರವಿ ರಾಜೀನಾಮೆಯನ್ನು ಅಂಗೀಕಾರ
ಸಚಿವ ಸ್ಥಾನಕ್ಕೆಸಿ.ಟಿ.ರವಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ.
ಸಿ.ಟಿ.ರವಿ ರಾಜೀನಾಮೆ
ಬೆಂಗಳೂರು: ಪ್ರವಾಸೋದ್ಯಮ, ಕನ್ನಡ ಹಾಗೂ ಸಂಸ್ಕೃತಿ ಸಚಿವ ಸ್ಥಾನಕ್ಕೆ ಸಿ.ಟಿ.ರವಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ, ಕಳೆದ ತಿಂಗಳು ಸಿಎಂಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದರು. ಆದರೆ, ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರದ ಬಗ್ಗೆ ನಿರ್ಧಾರ ಕೈಗೊಂಡಿರಲಿಲ್ಲ. ಸದ್ಯಕ್ಕೆ ಸಚಿವನಾಗಿ ಮುಂದುವರಿಯುವಂತೆ ಸಿ.ಟಿ.ರವಿಗೆ ಸೂಚನೆ ನೀಡಿದ್ದರು.