ಬೆಂಗಳೂರು: ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇಂದಿನ ಕಾಲದಲ್ಲಿ ತಂತ್ರಜ್ಞಾನ ಬಹಳ ಮುಖ್ಯ. ತರಗತಿಗಳಲ್ಲಿ ಡಿಜಿಟಲ್ ಕಲಿಕಾ ಸಾಧನಗಳನ್ನು ಪರಿಣಾಮಕಾರಿಯಾಗಿ ಬಳಸುವುದರಿಂದ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ ಮತ್ತು ಭಾಗವಹಿಸುವಿಕೆಯನ್ನು ಹೆಚ್ಚಿಸಬಹುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಸಿಂಧಿ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಮತ್ತು ಯುವಕರ ಭವಿಷ್ಯಕ್ಕೆ ಸರಿಯಾದ ಮಾರ್ಗವನ್ನು ತೋರಿಸಲು ಮತ್ತು ದೇಶದಲ್ಲಿ ಅಂತರ್ಗತ ಅಭಿವೃದ್ಧಿಯನ್ನು ಉತ್ತೇಜಿಸಲು ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಉತ್ತೇಜಿಸಬೇಕು. ಶಿಕ್ಷಕರ ತರಬೇತಿಗೆ ವ್ಯವಸ್ಥೆ ಮಾಡಬೇಕು, ಅಂತರ್ಗತ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡಬೇಕು, ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸಬೇಕು. ಪರಿಸರ ಸಂರಕ್ಷಣೆ ಮತ್ತು ನೀರಿನ ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.