ಕರ್ನಾಟಕ

karnataka

ETV Bharat / city

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ₹ 5 ಕೋಟಿ ಮೌಲ್ಯದ ವಸ್ತುಗಳು ವಶ - DCP Rohini Katoch Sepat

ಭರ್ಜರಿ ಕಾರ್ಯಾಚರಣೆ ನಡೆಸಿ ದರೋಡೆ, ಕಳ್ಳತನ, ಸರಗಳ್ಳತನ ಸೇರಿದಂತೆ 342 ಪ್ರಕರಣಗಳನ್ನು ಬೇಧಿಸಿರುವ ದಕ್ಷಿಣ ವಿಭಾಗ ಪೊಲೀಸರು, ಒಟ್ಟು 229 ಆರೋಪಿಗಳಿಂದ ₹ 5.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

great-police-operation

By

Published : Oct 1, 2019, 8:37 PM IST

ಬೆಂಗಳೂರು: ಭರ್ಜರಿ ಕಾರ್ಯಾಚರಣೆ ನಡೆಸಿ ದರೋಡೆ, ಕಳ್ಳತನ, ಸರಗಳ್ಳತನ ಸೇರಿದಂತೆ 342 ಪ್ರಕರಣಗಳನ್ನು ಬೇಧಿಸಿರುವ ದಕ್ಷಿಣ ವಿಭಾಗ ಪೊಲೀಸರು, ಒಟ್ಟು 229 ಆರೋಪಿಗಳಿಂದ ₹ 5.17 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಪತ್ತೆಯಾದ ವಸ್ತುಗಳನ್ನು ಸಾರ್ವಜನಿಕರಿಗೆ ಹಿಂದಿರುಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಏನೇನು ಪತ್ತೆ: 8.7 ಕೆಜಿ ಚಿನ್ನ, 25 ಕೆಜಿ ಬೆಳ್ಳಿ, 155 ಮೂರು ಚಕ್ರದ ವಾಹನಗಳು, 10 ನಾಲ್ಕು ಚಕ್ರದ ವಾಹನಗಳು, 122 ಮೊಬೈಲ್, 54 ಲ್ಯಾಪ್​ಟಾಪ್ ಹಾಗೂ 23.85 ಲಕ್ಷ ನಗದು ಸೇರಿ ಒಟ್ಟು ₹ 5.17 ಕೋಟಿ ಮೌಲ್ಯದ ವಸ್ತಗಳನ್ನ ಜಪ್ತಿ ಮಾಡಿದ್ದಾರೆ.

ವಶಪಡಿಸಿಕೊಂಡಿರುವ ಮಾಲು

ದಕ್ಷಿಣಾ ವಿಭಾಗ ಡಿಸಿಪಿ ರೋಹಿಣಿ ಕಟೋಚ್‌ ಸೆಫಟ್‌ ಹಾಗೂ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ಕಾರ್ಯಾಚರಣೆ ನಡೆಸುವಂತೆ ಆದೇಶ ನೀಡಿದ್ದರು.

ವಶಪಡಿಸಿಕೊಂಡಿರುವ ಎಲ್ಲ ವಸ್ತುಗಳ ವಾರಸುದಾರರ ಪತ್ತೆ ಹಚ್ಚಿ ಪೊಲೀಸರು ನಗರ ಪೊಲೀಸ್ ಆಯುಕ್ತರ ಸಮ್ಮುಖದಲ್ಲಿ ಅವರಿಗೆ ವಸ್ತುಗಳನ್ನು ಮರಳಿಸಲಾಯಿತು. ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ ಹಾಗೂ ಉತ್ತಮ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳಿಗೆ ಬಹುಮಾನ ನೀಡಲಾಯಿತು.

ABOUT THE AUTHOR

...view details