ಕರ್ನಾಟಕ

karnataka

ETV Bharat / city

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಠೇವಣಿದಾರರ ಪ್ರತಿಭಟನೆ

ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣೆ ವೇದಿಕೆಯಿಂದ ಪ್ರತಿಭಟನೆ ನಡೆಸಿದರು.

demanding cbi probe
ಠೇವಣಿದಾರರ ಪ್ರತಿಭಟನೆ

By

Published : Nov 29, 2021, 2:10 PM IST

ಬೆಂಗಳೂರು:ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ಷೇರುದಾರರು ಮತ್ತು ಠೇವಣಿದಾರರ ಹಿತರಕ್ಷಣೆ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರಕರಣದಲ್ಲಿ ಆರ್​ಬಿಐ ಮಧ್ಯಪ್ರವೇಶಿಸಿ, ವಂಚನೆಗೆ ಒಳಗಾದವರಿಗೆ ನ್ಯಾಯ ಕೊಡಿಸಬೇಕು. ಪ್ರಕರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಡಾ.ಶಂಕರ್​ ಗುಹಾ ದ್ವಾರಕಾನಾಥ್ ಬೆಳ್ಳೂರು, ವಂಚನೆಯ ವಿರುದ್ಧ ಕಳೆದ 1 ವರ್ಷದಿಂದ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಕಂಡೂ ಕಾಣದಂತೆ ನಡೆದುಕೊಳ್ಳುತ್ತಿದೆ. ಪ್ರಕರಣದ ಇತ್ಯರ್ಥಕ್ಕಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ದುಡ್ಡು ತಿಂದಿರುವ ಕಳ್ಳರು ನೆಮ್ಮದಿಯಿಂದ ಇದ್ದಾರೆ. ಈಗಾಗಲೇ ಹಣ ಕಳೆದುಕೊಂಡು ಮೂವರು ಸಾವನ್ನಪ್ಪಿದ್ದಾರೆ. ಹಣ ಕೊಳ್ಳೆ ಹೊಡೆದ ಕಳ್ಳರನ್ನು ಪ್ರಭಾವಿಗಳು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬ್ಯಾಂಕ್​ ಹಗರಣ ಬೆಳಕಿಗೆ ಬಂದು 2 ವರ್ಷಗಳಾಗಿವೆ. ಈವರೆಗೂ ಹಗರಣದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ. ಶಾಸಕ ರವಿ ಸುಬ್ರಮಣ್ಯ ಹಾಗೂ ಸಂಸದ ತೇಜಸ್ವಿ ಸೂರ್ಯ ಆರೋಪಿಗಳ ಪರವಾಗಿದ್ದಾರೆ ಎಂಬ ಆರೋಪವಿದೆ. ಜನಪ್ರತಿನಿಧಿಗಳು ಹಗರಣದ ಬಗ್ಗೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

ಇದನ್ನೂ ಓದಿ: ಕಳಪೆ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ : ಮೊರಾರ್ಜಿ ಶಾಲೆಗೆ ಶಾಸಕ ಬಯ್ಯಾಪೂರ ಭೇಟಿ

ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸುತ್ತಿದ್ದರೂ ಪ್ರಭಾವಿಗಳ ಕೈವಾಡದಿಂದ ತನಿಖೆಯ ಹಾದಿ ತಪ್ಪುತ್ತಿದೆ. ಹೀಗಾಗಿ ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.

ABOUT THE AUTHOR

...view details