ಬೆಂಗಳೂರು: ಕೋವಿಡ್ 19 ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದು ಓದು ಮತ್ತು ಸಿನೆಮಾ ವೀಕ್ಷಣೆಯಲ್ಲೇ ಸಮಯ ಕಳೆದೆ. ಈ ಬಿಡುವಿನಲ್ಲಿ ಎರಡು ಸಿನೆಮಾಗಳನ್ನು ವೀಕ್ಷಿಸಿದೆ. ಒಂದು 'ಜೈ ಭೀಮ್' ಮತ್ತೊಂದು 'ಜನ ಗಣ ಮನ'. ಸೂಕ್ಷ್ಮ ಕಥಾಹಂದರದ ಈ ಸಿನೆಮಾಗಳೆರಡೂ ನನ್ನ ಮನ ಕಲಕಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ ಮತ್ತು 'ಜೈ ಭೀಮ್' ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನೂ ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದಿದ್ದಾರೆ.