ಬೆಂಗಳೂರು: ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ನಾನು ಪದೇ ಪದೆ ಹೇಳಿದ್ದೇನೆ. ಸಿಎಂ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅಗತ್ಯವಿರಲಿಲ್ಲ: ಹೆಚ್ಡಿಕೆ ಟ್ವೀಟ್ - ಹೆಚ್.ಡಿ. ಕುಮಾರಸ್ವಾಮಿ
ಸಿಎಂ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಟೆಲಿಫೋನ್ ಕದ್ದಾಲಿಕೆ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ನೆರೆ ಸಂತ್ರಸ್ತರ ನೆರವಿಗೆ ಕೇಳಿದಷ್ಟು ನೀಡಲು ಸರ್ಕಾರ ನೋಟು ಪ್ರಿಂಟ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕುಮಾರಸ್ವಾಮಿ ಅನರ್ಹ ಶಾಸಕರನ್ನು ವಿಶೇಷ ವಿಮಾನದ ಮೂಲಕ ತಾರಾ ಹೋಟೆಲ್‍ನಲ್ಲಿ ವಾಸ್ತವ್ಯ ಕಲ್ಪಿಸಲು ನೋಟ್ ಪ್ರಿಂಟ್ ಮಾಡಿ ಕೊಟ್ಟವರು ಯಾರು ? ಎಂದು ಟ್ವೀಟರ್ನಲ್ಲಿ ಪ್ರಶ್ನಿಸಿದ್ದಾರೆ.