ಬೆಂಗಳೂರು:ರೈತರ ಜಮೀನು ಸ್ವಾಧೀನ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೆಐಎಡಿಬಿ ಅಧಿಕಾರಿಗಳ ಜೊತೆ ಸಮಾಲೋಚನಾ ಸಭೆ ನಡೆಸಿದರು.
ರೈತರ ಜಮೀನು ಸ್ವಾಧೀನ ಸಂಬಂಧ ಸಮಾಲೋಚನಾ ಸಭೆ ನಡೆಸಿದ ಹೆಚ್ಡಿಕೆ - ಬೆಂಗಳೂರು ಸುದ್ದಿ
ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನು ಸ್ವಾಧೀನ ಸಂಬಂಧ ಉಂಟಾಗಿದ್ದ ಸಮಸ್ಯೆಗಳ ಕುರಿತು ಹೆಚ್ಡಿಕೆ ಸಮಾಲೋಚನಾ ಸಭೆ ನಡೆಸಿದರು.
ರೈತರ ಜಮೀನು ಸ್ವಾಧೀನ ಸಂಬಂಧ ಸಮಾಲೋಚನಾ ಸಭೆ ನಡೆಸಿದ ಹೆಚ್ಡಿಕೆ
ಖನಿಜ ಭವನದಲ್ಲಿ ನಡೆದ ಸಭೆಯಲ್ಲಿ ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಹಟ್ನಾ, ಗೊಲ್ಲರಹಟ್ಟಿ ಸುತ್ತಮುತ್ತಲ ಗ್ರಾಮಗಳ ರೈತರ ಜಮೀನು ಸ್ವಾಧೀನ ಸಂಬಂಧ ಉಂಟಾಗಿದ್ದ ಸಮಸ್ಯೆಗಳ ಕುರಿತು ಹೆಚ್ಡಿಕೆ ಚರ್ಚಿಸಿದರು. 500 ಎಕರೆ ಒಣಭೂಮಿ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ರೈತರಿಗೆ ಅನ್ಯಾಯವಾಗದಂತೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 700ಕ್ಕೂ ಹೆಚ್ಚು ಎಕರೆ ನೀರಾವರಿ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡುವಂತೆ ಒತ್ತಾಯಿಸಿ ಅಗತ್ಯ ಸಲಹೆ ನೀಡಿದರು.