ಬೆಂಗಳೂರು: ನಿಮಗೋಸ್ಕರ ದುಡಿದ ಕಾರ್ಯಕರ್ತರು ಇದ್ದಾರೆ. ಅವರಿಗೆ ಅವಕಾಶ ಮಾಡಿಕೋಡಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ವಿಚಾರವಾಗಿ ಮಾತನಾಡಿದ ಅವರು, ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ನಿವೃತ್ತಿ ಘೋಷಿಸಿದ್ದಾರೆ. ಆದ್ರೆ, ಅವರ ಅನುಭವ ರಾಜ್ಯಕ್ಕೆ ಅವಶ್ಯಕತೆ ಇದೆ. ಮೋದಿ ವಂಶಪಾರಂಪರ್ಯ ರಾಜಕೀಯ ಬೇಡ ಅಂತಾ ಹೇಳಿದ್ದಾರೆ. ಪ್ರಧಾನಿಯವರ ಮಾತನ್ನು ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಟೀಕಿಸಿದರು.