ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಅವರ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿರುವುದು ಸಂತೋಷ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಮಂಡಳಿಗೆ ಯಡಿಯೂರಪ್ಪನವರನ್ನು ನೇಮಕ ಮಾಡಿರುವ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಇದೇ ವೇಳೆ ಸಾವರ್ಕರ್ ಫೋಟೋ ಅಳವಡಿಕೆ ವಿಚಾರವಾಗಿ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ, ಮುಸ್ಲಿಮರ ಪ್ರದೇಶ ಅಲ್ಲ. ಮುಸ್ಲಿಮರು ಇರೋ ಕಡೆ ಯಾಕೆ?. ಬೇರೆ ಕಡೆ ಹಾಕಬಹುದಿತ್ತಲ್ಲ ಎಂದು ಹೇಳಿರುವುದಾಗಿ ಸ್ಪಷ್ಟನೆ ಕೊಟ್ಟರು.
ಶಿವಮೊಗ್ಗದಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವರಣೆ ನೀಡಿ ವಾಪಸಾದ ಸಂದರ್ಭದಲ್ಲಿ ಶಿವಮೊಗ್ಗ ಘಟನೆಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದ್ದರು. ಈ ಮಾತಿನಿಂದ ಸಿಟ್ಟಾಗಿದ್ದ ಸಿದ್ದರಾಮಯ್ಯ ಮೇಲಿನ ಪ್ರತಿಕ್ರಿಯೆ ನೀಡಿದ್ದರು. ಇದೀಗ ತಮ್ಮ ಪ್ರತಿಕ್ರಿಯೆಗೆ ವ್ಯಾಪಕ ಟೀಕೆ ಎದುರಾಗಿರುವುದಕ್ಕೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡುವ ಕಾರ್ಯ ಮಾಡಿದ್ದಾರೆ.
ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ: ಬಿ ಎಸ್ ಯಡಿಯೂರಪ್ಪ