ಕರ್ನಾಟಕ

karnataka

ETV Bharat / city

ವರದಕ್ಷಿಣೆ ಕಿರುಕುಳ.. ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಆರೋಪ - ವರದಕ್ಷಿಣೆ ಕಿರುಕುಳ

ವರದಕ್ಷಣೆ ಕಿರುಕುಳ ನೀಡಿ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದಲ್ಲಿ ಕಂಡು ಬಂದಿದೆ.

ವರದಕ್ಷಿಣೆ ಕಿರುಕುಳ

By

Published : Oct 7, 2019, 7:57 PM IST

ನೆಲಮಂಗಲ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದಲ್ಲಿ ಕಂಡು ಬಂದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಗಣೇಶನಗುಡಿಯ ಮಹಿಳೆ ಅಂಜಲಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ. ಅಂಜಲಿ ಮೂಲತಃ ಟಿ.ಬೇಗೂರು ನಿವಾಸಿಯಾಗಿದ್ದು, ಕಳೆದ ಐದು ವರ್ಷಗಳ ಹಿಂದೆ ಗಣೇಶನಗುಡಿಯ ರಮೇಶ್​ ಎಂಬುವರ ಜೊತೆ ವಿವಾಹವಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಗಂಡು ಮಗು ಜನಿಸಿಲ್ಲ ಎಂಬ ಕಾರಣಕ್ಕೆ ಗಂಡನ ಮನೆಯವರು ಪ್ರತಿನಿತ್ಯ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದಾರೆ ಎಂದು ನೊಂದ ಮಹಿಳೆ ಆರೋಪಿಸುತ್ತಿದ್ದಾರೆ.

ರಮೇಶ್​ನ ತಂದೆ ಚಿಕ್ಕರಂಗಯ್ಯ, ತಾಯಿ ಮಂಜುಳಾ, ನಾದಿನಿ ತೇಜಸ್ವಿನಿ, ಮೈದುನಾ ಹೇಮಂತ್ ಕುಮಾರ್ ಅಂಜಲಿಯ ಗುಪ್ತಾಂಗ ಸೇರಿದಂತೆ ಕೈ ಕಾಲುಗಳ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಅಂಜಲಿ ಪೋಷಕರು ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲು ಹೋದಾಗ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details