ಕರ್ನಾಟಕ

karnataka

ETV Bharat / city

ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ - ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ

ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಮುಂದಿನ ಮೂರು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಆದೇಶ ಮಾಡಿದೆ.

ಹೈಕೋರ್ಟ್ ಆದೇಶ
ಹೈಕೋರ್ಟ್ ಆದೇಶ

By

Published : Mar 5, 2021, 7:24 PM IST

ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘಕ್ಕೆ ಮುಂದಿನ ಮೂರು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಸೂಚಿಸಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶ ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಸಂಘದ ಪದಾಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಬಳಿಕ ಸರ್ಕಾರ, ಸಂಘಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರಲಿಂಗೇಗೌಡ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ನಿಯಮಗಳ ಪ್ರಕಾರ 6 ತಿಂಗಳಿಗಿಂತ ಹೆಚ್ಚಿನ ಅವಧಿಗೆ ಆಡಳಿತಾಧಿಕಾರಿ ನೇಮಿಸುವಂತಿಲ್ಲ. ಆದರೂ, ಕಳೆದ ಎರಡೂವರೆ ವರ್ಷದಿಂದ ಆಡಳಿತಾಧಿಕಾರಿ ಅವಧಿ ವಿಸ್ತರಿಸಿಕೊಂಡು ಬರಲಾಗುತ್ತಿದೆ. ಆದ್ದರಿಂದ ಸಂಘಕ್ಕೆ ಚುನಾವಣೆ ನಡೆಸುವಂತೆ ನಿರ್ದೇಶಿಸಬೇಕು ಎಂದು ಕೋರಿದರು.

ಇದನ್ನೂ ಓದಿ:ನನಗೆ ಸಿಡಿ ಕೊಟ್ಟಿದ್ದು ಸಂತ್ರಸ್ತೆ ಕುಟುಂಬಸ್ಥರು: ದಿನೇಶ್ ಕಲ್ಲಹಳ್ಳಿ

ವಕೀಲರ ವಾದ ಪರಿಗಣಿಸಿದ ಪೀಠ, ನಿಯಮಾನುಸಾರ 6 ತಿಂಗಳಿಗಿಂತ ಹೆಚ್ಚಿನ ಅವಧಿಗೆ ಆಡಳಿತಾಧಿಕಾರಿ ವಿಸ್ತರಿಸುವಂತಿಲ್ಲ. ಆದರೆ, ಈ ಪ್ರಕರಣದಲ್ಲಿ ಆಡಳಿತಾಧಿಕಾರಿ ಅವಧಿ ವಿಸ್ತರಿಸಿಕೊಂಡು ಬರಲಾಗಿದೆ. ಆದ್ದರಿಂದ, ಸಂಘಕ್ಕೆ ಚುನಾವಣೆ ನಡೆಸುವುದು ಅಗತ್ಯವಾಗಿದೆ. ಹೀಗಾಗಿ, ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ABOUT THE AUTHOR

...view details