ಕರ್ನಾಟಕ

karnataka

ETV Bharat / city

ಗೋಶಾಲೆ ನಿರ್ಮಾಣ ಕುರಿತು ಪ್ರಶ್ನಿಸಿದರೆ ಕೇವಲ ಕಾಗದ ತೋರಿಸುತ್ತೀರಿ: ಹೈಕೋರ್ಟ್‌ ಅಸಮಾಧಾನ! - high court on goshala

ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣದ ವಿಚಾರವಾಗಿ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

HC dissatisfied on govt work of goshala
ಗೋಶಾಲೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

By

Published : Mar 29, 2022, 6:46 AM IST

ಬೆಂಗಳೂರು: ಗೋಶಾಲೆ ನಿರ್ಮಾಣಕ್ಕೆ ಪ್ರತಿ ಜಿಲ್ಲೆಯಲ್ಲೂ ಸ್ಥಳ ಗುರುತಿಸಲಾಗಿದೆ. ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದೆಲ್ಲಾ ಹೇಳುತ್ತೀರಿ. ಅವು ಎಲ್ಲೆಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಪ್ರಶ್ನಿಸಿದರೆ ಬರೀ ಕಾಗದ ತೋರಿಸುತ್ತೀರಲ್ಲಾ ಎಂದು ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ರಾಜ್ಯದ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಮತ್ತು ಈಗಿರುವ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಆಗ್ರಹಿಸಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್‌.ಆರ್. ಕೃಷ್ಣಕುಮಾರ್ ಒಳಗೊಂಡ ವಿಭಾಗೀಯ ನ್ಯಾಯಪೀಠ ಸೋಮವಾರದಂದು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲ ಅರುಣ್‌ ಶೌರಿ ಸರ್ಕಾರ ಈಗಾಗಲೇ ಜಮೀನುಗಳನ್ನು ಗುರುತಿಸಿದೆ. ಗುರುತಿಸಲಾದ ಜಮೀನುಗಳಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಹಣವನ್ನೂ ಬಿಡುಗಡೆ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನೂ ಓದಿ:ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ವಿರುದ್ಧ ತನಿಖೆಗೆ ಆಗ್ರಹಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಎಲ್ಲೆಲ್ಲಿ, ಎಷ್ಟು ಗೋಶಾಲೆ ಕಾರ್ಯ ನಿರ್ವಹಿಸುತ್ತಿವೆ. ಗೋಶಾಲೆ ಎಲ್ಲಿದೆ ಎಂದರೆ ಕೇವಲ ಜಮೀನು ಗುರುತಿಸಿದ್ದೇವೆ, ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳುತ್ತೀರಿ. ಎಲ್ಲೆಲ್ಲಿ ಕಾರ್ಯ ನಿರ್ವಹಿಸುತ್ತಿವೆ, ಎಲ್ಲೆಲ್ಲಿ ನಿರ್ಮಾಣ ಮಾಡುತ್ತಿದ್ದೀರಿ, ಎಲ್ಲಿ ಅಭಿವೃದ್ಧಿ ಪಡಿಸಿದ್ದೀರಿ ಎಂದರೆ ನಿಮ್ಮ ಬಳಿ ಉತ್ತರವೇ ಇಲ್ಲ. ನಿಮ್ಮ ಗೋಶಾಲೆಯೆಲ್ಲ ಬರೀ ಕಾಗದದ ಮೇಲೆ ಇದ್ದಂತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ವಿಚಾರಣೆ ಮುಂದೂಡಿದರು.

ABOUT THE AUTHOR

...view details