ಕರ್ನಾಟಕ

karnataka

ಮಕ್ಕಳಲ್ಲಿ ಅಪೌಷ್ಠಿಕತೆ: ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಮುಂದುವರಿಯಲು ನ್ಯಾ.ವೇಣುಗೋಪಾಲಗೌಡ ಒಪ್ಪಿಗೆ

By

Published : Nov 17, 2021, 8:52 PM IST

ಪ್ರಕರಣದ ಹಿಂದಿನ ವಿಚಾರಣೆ ವೇಳೆ ವಕೀಲ ಕ್ಲಿಫ್ಟನ್‌ ಡಿ. ರೊಜಾರಿಯೊ ಅವರು ಪೀಠಕ್ಕೆ ಮಾಹಿತಿ ನೀಡಿ ಸಮಿತಿಯ ಅಧ್ಯಕ್ಷರಾಗಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಬೇರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಗತ್ಯವಿದೆ ಎಂದಿದ್ದರು.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಅಪೌಷ್ಟಿಕತೆಗೆ ಒಳಗಾಗಿರುವ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಾವಸ್ಥೆಯ ಹೆಣ್ಣುಮಕ್ಕಳನ್ನು ಗುರುತಿಸುವ, ಆರೋಗ್ಯ ತಪಾಸಣೆ ಮಾಡುವ ಹಾಗೂ ಪೌಷ್ಟಿಕಾಂಶಗಳನ್ನು ಒದಗಿಸುವ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರೇ ಮುಂದುವರೆಯಲು ಒಪ್ಪಿದ್ದಾರೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ ವಿಮೋಚನಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ಕೆಎಸ್ಎಲ್ಎಸ್ಎ ಪರ ವಕೀಲರು ಪೀಠಕ್ಕೆ ಮೆಮೋ ಸಲ್ಲಿಸಿ, ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ಮುಂದುವರೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಒಪ್ಪಿದ್ದಾರೆ ಎಂದು ತಿಳಿಸಿದರು.

ಮೆಮೋ ಪರಿಗಣಿಸಿದ ಪೀಠ, ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರಾಗಿ ನಿವೃತ್ತ ನ್ಯಾ. ವೇಣುಗೋಪಾಲಗೌಡ ಅವರನ್ನು ನೇಮಿಸಿ ಆದೇಶ ಹೊರಡಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿಂದಿನ ವಿಚಾರಣೆ ವೇಳೆ ವಕೀಲ ಕ್ಲಿಫ್ಟನ್‌ ಡಿ. ರೊಜಾರಿಯೊ ಅವರು ಪೀಠಕ್ಕೆ ಮಾಹಿತಿ ನೀಡಿ ಸಮಿತಿಯ ಅಧ್ಯಕ್ಷರಾಗಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಬೇರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಗತ್ಯವಿದೆ ಎಂದಿದ್ದರು. ಈ ನಿಟ್ಟಿನಲ್ಲಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್‌ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಹೆಸರು ಶಿಫಾರಸು ಮಾಡುವಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪೀಠ ನಿರ್ದೇಶನ ನೀಡಿತ್ತು.

ABOUT THE AUTHOR

...view details