ಬೆಂಗಳೂರು: ಎಚ್.ಸಿ.ಎಲ್, ಅಪ್ಲೈಡ್ ಮೆಟೀರಿಯಲ್, ರಾಕಾನ್ ಮತ್ತು ಚಿಂಟ್ ಕಂಪನಿಗಳು ರಾಜ್ಯದಲ್ಲಿ ಒಟ್ಟು 5 ಸಾವಿರ ಕೋಟಿ ರೂ.ಗಿಂತಲೂ ಅಧಿಕ ಬಂಡವಾಳ ಹೂಡಲು ಮುಂದೆ ಬಂದಿವೆ. ಈ ಹೂಡಿಕೆಯಿಂದಾಗಿ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಐಟಿ ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು.
ರಾಜ್ಯದಲ್ಲಿ ಈ ಕಂಪನಿಗಳ ಹೂಡಿಕೆಯಿಂದಾಗಿ ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್, ಸೌರ ಕೋಶಗಳು, ವಾಶಿಂಗ್ ಮಷಿನ್ ಮತ್ತು ಹವಾ ನಿಯಂತ್ರಕಗಳಿಗೆ ಅಳವಡಿಸುವ ಮೋಟಾರುಗಳ ಉತ್ಪಾದನೆ ಸಾಧ್ಯವಾಗಲಿದೆ ಎಂದರು.
4 ಕೋಟಿಗೂ ಹೆಚ್ಚು ಜನರನ್ನು ತಲುಪಿದ ಬಿಟಿಎಸ್:
ವರ್ಷದಿಂದ ವರ್ಷಕ್ಕೆ ವಿಸ್ತಾರವಾಗುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗದ 24ನೇ ಆವೃತ್ತಿಯು ಒಟ್ಟಾರೆ 4 ಕೋಟಿಗೂ ಹೆಚ್ಚು ಜನರನ್ನು ತಲುಪಿದೆ ಎಂದು ಐಟಿ/ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.