ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಕೈಜೋಡಿಸುವಂತೆ ಪ್ರಧಾನಿ ಮೋದಿ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಮ್ಮ ಪಿಂಚಣಿ ಹಣವನ್ನು ಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಪಿಎಂ ಕೇರ್ಸ್ ನಿಧಿ, ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇವೇಗೌಡರು 3 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಈ ಕುರಿತು ಟ್ವೀಟ್ನಲ್ಲಿ ಬರೆದುಕೊಂಡಿರುವ ಗೌಡರು, 'ಕೊರೊನಾ ನಿಯಂತ್ರಣ ನಿಧಿಗೆ ನಾನು ಪಡೆಯುವ ಪಿಂಚಣಿ ಹಣವನ್ನು ನೀಡುತ್ತಿದ್ದೇನೆ. ಪಿಎಂ ಕೇರ್ಸ್ ನಿಧಿ, ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಮತ್ತು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ ಒಂದೊಂದು ಲಕ್ಷ ನೀಡುತ್ತಿದ್ದೇನೆ' ಎಂದು ಹೇಳಿದ್ದಾರೆ.
ಈ ಮಹಾಮಾರಿ ಕೊರೊನಾ ಸೋಂಕಿಗೆ ಇಡೀ ದೇಶವೇ ಆರ್ಥಿಕ ನಷ್ಟ ಅನುಭವಿಸುತ್ತಿದೆ. ಹೀಗಾಗಿ ಪ್ರಧಾನಿ, ಮುಖ್ಯಮಂತ್ರಿ ಕೊರೊನಾ ಪರಿಹಾರ ನಿಧಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿ ಎಂದು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.