ಕರ್ನಾಟಕ

karnataka

ETV Bharat / city

ಇಂದು ಡಾ.ರಾಜ್​​ಕುಮಾರ್ ಜನ್ಮದಿನ : ಟ್ವೀಟ್ ಮೂಲಕ ಭಾವಪೂರ್ಣ ನಮನ ಸಲ್ಲಿಸಿದ ಹೆಚ್​ಡಿಡಿ, ಹೆಚ್​ಡಿಕೆ - ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್

ಕನ್ನಡಿಗರ ಸಾಕ್ಷಿಪ್ರಜ್ಞೆ, ಆಸ್ಮಿತೆ, ಶಕ್ತಿ, ಸ್ಫೂರ್ತಿಯ ಸೆಲೆಯೂ ಆಗಿರುವ ಡಾ.ರಾಜ್​​ಕುಮಾರ್‌ ಅವರನ್ನು ಸದಾ ಸ್ಮರಿಸುತ್ತಾ ಅವರ ಆದರ್ಶ ಹೆಜ್ಜೆಗಳಲ್ಲಿ ಶ್ರದ್ಧೆಯಿಂದ ನಡೆಯೋಣ. ನಾಡು, ನುಡಿ, ನೆಲ, ಜಲ ವಿಚಾರಗಳಲ್ಲಿ ಅಣ್ಣಾವ್ರು ಹೊಂದಿದ್ದ ಆಶಯಗಳನ್ನು ಸಾಕಾರಗೊಳಿಸಲು ಶ್ರಮಿಸೋಣ ಎಂದು ಹೆಚ್​ಡಿಕೆ ಹೇಳಿದ್ದಾರೆ..

HD Devegowda and HD  Kumaraswamy
ಹೆಚ್.ಡಿ.ದೇವೇಗೌಡ , ಹೆಚ್.ಡಿ.ಕುಮಾರಸ್ವಾಮಿ

By

Published : Apr 24, 2022, 10:49 AM IST

ಬೆಂಗಳೂರು :ವರನಟ ಡಾ.ರಾಜ್​​ಕುಮಾರ್ ಅವರ ಜನ್ಮದಿನದ ಅಂಗವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾವಪೂರ್ಣ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ದೇವೇಗೌಡರು, ಕರ್ನಾಟಕದಲ್ಲಿ ವಿಶ್ವಮಾನವ ಸಂದೇಶ ಮತ್ತು ಸದ್ಭಾವನೆಯನ್ನು ಹರಡಬಲ್ಲವರು‌ ರಾಜ್​​ಕುಮಾರ್-ಕುವೆಂಪು. ಅಭಿಮಾನಿಗಳನ್ನು ದೇವರು ಎಂದು ಕರೆದು ಕನ್ನಡಿಗರ ಕಣ್ಮಣಿಯಾದ ಮೇರು ನಟ, ಶ್ರೇಷ್ಠ ಗಾಯಕ ಮತ್ತು ಯೋಗ ಸಾಧಕರೂ ಆದ ಡಾ.ರಾಜ್ ಕುಮಾರ್ ಅವರ 93ನೇ ಜನ್ಮಮಹೋತ್ಸವದಂದು ಅವರಿಗೆ ನನ್ನ ಆದರ ಮತ್ತು ಗೌರವಪೂರಕ ನಮನಗಳು ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ಕನ್ನಡಿಗರ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್‌ ತಾರೆ, ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರತ್ನ, ಪದ್ಮಭೂಷಣ ಡಾ.ರಾಜ್​​ಕುಮಾರ್‌ ಅವರ ಜನ್ಮ ದಿನದೊಂದು ಆ ಮೇರುನಟರಿಗೆ ನನ್ನ ಭಾವಪೂರ್ಣ ನಮನಗಳು ಎಂದು ತಿಳಿಸಿದ್ದಾರೆ.

ಸಿನಿಮಾ ಎಂದರೆ ಮನರಂಜನೆಯಷ್ಟೇ ಅಲ್ಲ, ಸಮಾಜದ ಪಾಲಿನ ಚಿಕಿತ್ಸಕ ಮಾರ್ಗ ಎಂದು ನಂಬಿ ನಡೆದ ಭಾರತೀಯ ಚಿತ್ರರಂಗದ ಏಕೈಕ ಕಲಾಸಂತರು ಅವರು. ಈ ಕಾರಣಕ್ಕಾಗಿಯೇ ಅಣ್ಣಾವ್ರು ಅಜರಾಮರ. ಅವರ ಚಿತ್ರಗಳನ್ನೇ ನೋಡಿಕೊಂಡು ಬೆಳೆದ ನನ್ನ ಮೇಲೆ ಅವರ ಪ್ರಭಾವ ಹೆಚ್ಚು. 'ಬಂಗಾರದ ಮನುಷ್ಯ' ಚಿತ್ರವೇ ನಾನಿಂದು ಕೃಷಿಕನಾಗಲು ಪ್ರೇರಣೆ ಎಂದು ಬಣ್ಣಿಸಿದ್ದಾರೆ.

ಕನ್ನಡಿಗರ ಸಾಕ್ಷಿಪ್ರಜ್ಞೆ, ಆಸ್ಮಿತೆ, ಶಕ್ತಿ, ಸ್ಫೂರ್ತಿಯ ಸೆಲೆಯೂ ಆಗಿರುವ ಡಾ.ರಾಜ್​​ಕುಮಾರ್‌ ಅವರನ್ನು ಸದಾ ಸ್ಮರಿಸುತ್ತಾ ಅವರ ಆದರ್ಶ ಹೆಜ್ಜೆಗಳಲ್ಲಿ ಶ್ರದ್ಧೆಯಿಂದ ನಡೆಯೋಣ. ನಾಡು, ನುಡಿ, ನೆಲ, ಜಲ ವಿಚಾರಗಳಲ್ಲಿ ಅಣ್ಣಾವ್ರು ಹೊಂದಿದ್ದ ಆಶಯಗಳನ್ನು ಸಾಕಾರಗೊಳಿಸಲು ಶ್ರಮಿಸೋಣ ಎಂದು ಹೆಚ್​ಡಿಕೆ ಹೇಳಿದ್ದಾರೆ.

ಇದನ್ನೂ ಓದಿ:ಆರ್​ಜಿವಿ ಹಾಗೂ ರಿಯಲ್ ಸ್ಟಾರ್ ಡೆಡ್ಲಿ ಜೋಡಿ ಎಂದ ಅಭಿನಯ ಚಕ್ರವರ್ತಿ!

ABOUT THE AUTHOR

...view details