ಬೆಂಗಳೂರು: ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಮನ ಸಲ್ಲಿಸಿದ್ದಾರೆ.
ಭಕ್ತರ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಲಿಂಗೈಕ್ಯ ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆಯಂದು ನನ್ನ ಭಕ್ತಿಪೂರ್ವಕ ನಮನಗಳು. ಶ್ರೀಗಳನ್ನು ಸ್ಮರಿಸುತ್ತಾ ಅವರು ಹಾಕಿಕೊಟ್ಟ ಸನ್ನಡತೆಯ ದಾರಿಯಲ್ಲಿ ಸಾಮರಸ್ಯದಿಂದ ಬಾಳಿ ಅವರ ಅನುಗ್ರಹಕ್ಕೆ ಭಾಜನರಾಗೋಣ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.