ಕರ್ನಾಟಕ

karnataka

ETV Bharat / city

ಹಿಜಾಬ್ ಕುರಿತ ತೀರ್ಪು : ನ್ಯಾಯಾಲಯ ಆದೇಶ ಪಾಲನೆ ಎಲ್ಲರ ಕರ್ತವ್ಯ ಎಂದ ಹೆಚ್.ಡಿ. ಕುಮಾರಸ್ವಾಮಿ

ಹಿಜಾಬ್ ಕುರಿತ ಹೈಕೋರ್ಟ್​ ಆದೇಶವನ್ನು ಪಾಲನೆ ಮಾಡಬೇಕಾಗಿರುವುದು ಎಲ್ಲರ ಕರ್ತವ್ಯ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಕ್ಕಳ ಭವಿಷ್ಯದ ಮೇಲೆ ಆಗಿರುವ ಪರಿಣಾಮಗಳನ್ನು ಸರ್ಕಾರ ಸರಿಪಡಿಸಬೇಕು ಎಂದು ಇದೇ ವೇಳೆ ಹೇಳಿದ್ದಾರೆ.

hd-kumaraswami-reaction-on-hijab-controversy
ಹಿಜಾಬ್ ಕುರಿತ ತೀರ್ಪು :ನ್ಯಾಯಾಲಯ ಆದೇಶ ಪಾಲನೆ ಎಲ್ಲರ ಕರ್ತವ್ಯ ಎಂದ ಹೆಚ್.ಡಿ.ಕುಮಾರಸ್ವಾಮಿ

By

Published : Mar 15, 2022, 6:08 PM IST

Updated : Mar 15, 2022, 7:32 PM IST

ಬೆಂಗಳೂರು: ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನಿನ್ನೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ. ಕಾಕತಾಳೀಯ ಎಂಬಂತೆ ಇಂದು ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಹೊರ ಬಂದಿರುವುದಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಕ್ಕಳ ಶಿಕ್ಷಣ ಬಹಳ ಮುಖ್ಯ. ಆದರೆ, ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲನೆ ಮಾಡಬೇಕಾಗಿದ್ದು ಎಲ್ಲರ ಕರ್ತವ್ಯ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಮಕ್ಕಳ ಭವಿಷ್ಯದ ಮೇಲೆ ಆಗಿರುವ ಪರಿಣಾಮಗಳನ್ನು ಸರಿಪಡಿಸಬೇಕು ಎಂದು ಹೇಳಿದ್ದಾರೆ.

ಹಿಜಾಬ್ ಕುರಿತ ತೀರ್ಪಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​ಡಿಕೆ..

ಶಾಲಾ ಕಾಲೇಜುಗಳಲ್ಲಿ ಉಂಟಾಗಿರುವ ಅಹಿತಕರ ವಾತಾವರಣ, ಸಮವಸ್ತ್ರದ ಕಾರಣಕ್ಕೆ ಉಂಟಾಗಿರುವ ವಿವಾದಗಳಾಗಿರಬಹುದು, ಇವುಗಳನ್ನು ಸರಿದಾರಿಗೆ ತರುವ ಉದ್ದೇಶದಿಂದ ನಿಲುವಳಿ ಮಂಡಿಸಿದ್ದೇನೆ. ಸದನದಲ್ಲಿ ಈ ಬಗ್ಗೆ ನಾಳೆ ಚರ್ಚೆ ಮಾಡುತ್ತೇನೆ. ಸಭಾಧ್ಯಕ್ಷರು ಅವಕಾಶ ನೀಡುತ್ತಾರೆಂದು ನಂಬಿದ್ದೇನೆ ಎಂದು ಹೇಳಿದರು.

ಹಿಂಸಾಚಾರ ಮತ್ತು ಗಲಾಟೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇವೆಲ್ಲವೂ ಸರಿ ಹೋಗಬೇಕಿದೆ. ಕಾಂಗ್ರೆಸ್ ನವರೂ ಕಾನೂನು ಹದಗೆಟ್ಟಿರುವ ಬಗ್ಗೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತಾರೆ ಎಂಬ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿದೆ. ಮಂಡಿಸಲಿ, ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿ. ನನ್ನದೇನೂ ತಕರಾರಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿಕೆ ಇದೇ ವೇಳೆ ಸ್ಪಷ್ಟಪಡಿಸಿದರು.

ಓದಿ :ಒಮ್ಮೆ ಗಮನಿಸಿ.. ಪೆಟ್ರೋಲ್​ ಬಂಕ್​ನಲ್ಲಿ ನಿಮಗೆ ಸಿಗುವ ಉಚಿತ ಸೇವೆಗಳ ಬಗ್ಗೆ ತಿಳಿಯಿರಿ

Last Updated : Mar 15, 2022, 7:32 PM IST

ABOUT THE AUTHOR

...view details