ಕರ್ನಾಟಕ

karnataka

ETV Bharat / city

ಮರೆಯಾದ ಸಂಗೀತ ಭಂಡಾರ: ಎಸ್​ಪಿಬಿ ಅಗಲಿಕೆಗೆ ಕಂಬನಿ ಮಿಡಿದ ಹೆಚ್​ಡಿಕೆ

ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್​ಪಿಬಿ ಅವರ ಮಾತು ಈಗಲೂ ನನ್ನ ಕಿವಿಯಲ್ಲಿ ಅನುರಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​.ಡಿ. ಕುಮಾರಸ್ವಾಮಿ ಅವರು ಅಗಲಿದ ಗಾನ ಗಂಧರ್ವ ಎಸ್​​.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ನೆನೆದಿದ್ದಾರೆ.

hd-kumaraswamy-condolence-to-singar-sp-balasubrahmanyam-death
ಎಸ್ಪಿಬಿ ನಿಧನ

By

Published : Sep 25, 2020, 4:52 PM IST

ಬೆಂಗಳೂರು: ಸುಪ್ರಸಿದ್ಧ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕನ್ನಡ ಸೇರಿದಂತೆ 16ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದ ಎಸ್​ಪಿಬಿ ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅನುಕರಣೀಯ ಎಂದಿದ್ದಾರೆ.

ಎಸ್​ಪಿ ಅವರ ನಿಧನದಿಂದ ಸಂಗೀತ ಲೋಕದಲ್ಲಿ ಶೂನ್ಯ ಸೃಷ್ಟಿಯಾಗಿದೆ. ತಮ್ಮ ಮಧುರ ಕಂಠದಿಂದ ಸಂಗೀತ ಪ್ರೇಮಿಗಳ ಮನಸೂರೆಗೊಂಡಿದ್ದ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಬಾಲಸುಬ್ರಹ್ಮಣ್ಯಂ ಗಾನಸುಧೆಯ ಮೋಡಿಗೆ ಒಳಗಾದವರಲ್ಲಿ ನಾನೂ ಒಬ್ಬ. ಮರುಜನ್ಮ ಎಂಬುದಿದ್ದರೆ ಕನ್ನಡನಾಡಿನಲ್ಲಿ ಹುಟ್ಟಲು ಬಯಸುತ್ತೇನೆ ಎಂಬ ಎಸ್​ಪಿಬಿ ಅವರ ಮಾತು ಈಗಲೂ ಕಿವಿಯಲ್ಲಿ ಅನುರಣಿಸುತ್ತಿದೆ ಎಂದು ಸ್ಮರಿಸಿದ್ದಾರೆ.

ABOUT THE AUTHOR

...view details