ಕರ್ನಾಟಕ

karnataka

ETV Bharat / city

ಎಲ್ಲಿದ್ಯಪ್ಪ ಕುಮಾರಸ್ವಾಮಿ?: ಅಶ್ವತ್ಥ ನಾರಾಯಣ ಪ್ರಶ್ನೆಗೆ ಹೆಚ್​ಡಿಕೆ ಉತ್ತರವೇನು ಗೊತ್ತಾ?

ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ?. ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು?, ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದುನೋಡಿ ಅಶ್ವತ್ಥ್​ ನಾರಾಯಣ​ ಎಂದು ಹೆಚ್​​ಡಿಕೆ ಕಿಡಿಕಾರಿದ್ದಾರೆ.

H.D Kumaraswamy
ಹೆಚ್.ಡಿ. ಕುಮಾರಸ್ವಾಮಿ

By

Published : Aug 10, 2022, 12:07 PM IST

Updated : Aug 10, 2022, 2:16 PM IST

ಬೆಂಗಳೂರು: 'ನಕಲಿ ಸರ್ಟಿಫಿಕೇಟ್‌ ರಾಜ @ ನಕಲಿ ಸರ್ಟಿಫಿಕೇಟ್‌ ಶೂರ' ನನ್ನನ್ನು ಹುಡುಕುತ್ತಿದ್ದಾರೆ. ಎಲ್ಲಿದ್ಯಪ್ಪ ಕುಮಾರಸ್ವಾಮಿ? ಎಂದು ಕೇಳಿದ್ದಾರೆ. ಸದನದಲ್ಲೂ ಕಾಣಿಸಿಲ್ಲವಂತೆ, ರಾಮನಗರದಲ್ಲೂ ಕಂಡಿಲ್ಲವಂತೆ. ಕಣ್ಣಿಗೆ ಕಾಮಾಲೆಯಾದರೂ ಬಂದಿರಬೇಕು. ಜಾಣ ಕುರುಡಾದರೂ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಮನಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್​ ನಾರಾಯಣ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರಾವಳಿ ಕೊಲೆಗಳು, ಮಳೆ-ನೆರೆ ಚರ್ಚೆಗೆ ಅಧಿವೇಶನ ಕರೆಯಬೇಕೆಂದು ಒತ್ತಾಯಿಸಿದ್ದೇನೆ ನಿಜ. ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ?, ಉನ್ನತ ಶಿಕ್ಷಣದ ಹುಳುಕು ಹೊರ ಬಂದಾವೆಂಬ ಭಯವೇ?. ನನ್ನಲ್ಲೂ ದಾಖಲೆಗಳಿವೆ. ಬಿಚ್ಚಿದರೆ ಅವೇ 'ಸರ್ಟಿಫಿಕೇಟ್‌ ಕೋರ್ಸ್‌'ಗಿಂತ ಬೃಹತ್‌ ಚಾಪ್ಟರ್‌-1, ಚಾಪ್ಟರ್-2, ಚಾಪ್ಟರ್‌-3 ಆಗುತ್ತವೆ. ಬಿಚ್ಚಲೇ? ಎಂದು ಗುಡುಗಿದ್ದಾರೆ.

ಕಲಾಪವೆಂದರೆ ಮೈ ಬೆಚ್ಚಗಾಗುತ್ತಾ ಉನ್ನತ ಶಿಕ್ಷಣ ಸಚಿವರೇ?, ನಿಮ್ಮ ಕೌಶಲ್ಯತೆ ಗೊತ್ತಿದೆ. ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ?. ಆಪರೇಷನ್‌ ಕಮಲದಲ್ಲೂ ಕುಶಲತೆ?, ಕೋಟಿ ಕೋಟಿ ಹಣ ತುಂಬಿಸಿಕೊಂಡು ಹೋಗಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದಾ?, ಕೌಶಲ್ಯ ಮಂತ್ರಿಯಾಗಿದ್ದಕ್ಕೂ ಸಾರ್ಥಕ ಎಂದು ಹೆಚ್​ಡಿಕೆ ವ್ಯಂಗ್ಯವಾಡಿದ್ದಾರೆ.

ನಾನು ವಿರೋಧ ಪಕ್ಷದ ನಾಯಕ. ಅಧಿವೇಶನಕ್ಕೆ ಆಗ್ರಹಿಸುವುದು ನನ್ನ ಹಕ್ಕು. ಸದನದಲ್ಲಿ ಉತ್ತರಿಸುವ ಯೋಗ್ಯತೆ ಇದ್ದರೆ ಹಾರಿಕೆ ಉತ್ತರಗಳ ಮೂಲಕ ಜಾರಿಕೊಳ್ಳುವ ಯತ್ನವೇಕೆ?. ಕಲಾಪದಲ್ಲಿ ನನ್ನ ಮೌಲಿಕ ಪಾಲ್ಗೊಳ್ಳುವಿಕೆ ಎಷ್ಟು?, ನಿಮ್ಮದೆಷ್ಟು? ತುಲನೆ ಮಾಡಿಕೊಳ್ಳಿ. ಕಾಮಾಲೆ ಕಣ್ಣುಗಳ ಪೊರೆ ತೆಗೆದು ನೋಡಿ ಅಶ್ವತ್ಥ್​ ನಾರಾಯಣ ಎಂದು ಕಿಡಿಕಾರಿದ್ದಾರೆ.

ನನ್ನ ಸರ್ಕಾರವನ್ನು ತೆಗೆಯಲು ಸಮಾಜಘಾತುಕ ಶಕ್ತಿಗಳ ಜೊತೆ ಕೈ ಮಿಲಾಯಿಸಿದ್ದು, ಕ್ರಿಕೆಟ್‌ ಬೆಟ್ಟಿಂಗ್‌ ದಂಧೆಕೋರರ ಜತೆ ಶಾಮೀಲಾಗಿದ್ದು, ಹಣದ ಹೊಳೆ ಹರಿಸಿದ್ದು ಎಲ್ಲವೂ ಗೊತ್ತಿದೆ. ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ, ಬಿಚ್ಚಿಡಬೇಕು ಎಂದರೆ ಎಲ್ಲವನ್ನೂ ಬಿಚ್ಚಿಡುತ್ತೇನೆ. ಪಠ್ಯ ಪರಿಷ್ಕರಣೆ ಮಾಡಿದಿರಲ್ಲ. ದಾದಿಯರ ನಕಲಿ ಸರ್ಟಿಫಿಕೇಟ್‌ ಸೃಷ್ಟಿ ಹೇಗೆ?, ಆಪರೇಷನ್‌ ಕಮಲ ಮಾಡುವುದು ಹೇಗೆ?, ಕದ್ದುಮುಚ್ಚಿ ಹಣ ಸಾಗಿಸಿ ಶಾಸಕರ ಮನೆಗಳಲ್ಲಿ ಇಟ್ಟು ಬರುವುದು ಹೇಗೆ? ಇದೆಲ್ಲವನ್ನು ಪಠ್ಯದಲ್ಲಿ ಸೇರಿಸಿದ್ದಿದ್ದರೆ ಮುಂದಿನ ಯುವಜನರಿಗೂ ನಿಮ್ಮಂತೆಯೇ ಆಗುವ ಭಾಗ್ಯ ಸಿಗುತ್ತಿತ್ತು ಅಲ್ಲವೇ ಆಪರೇಷನ್‌ ಅಶ್ವತ್ಥ್​​ ನಾರಾಯಣ? ಎಂದು ಹೆಚ್​​ಡಿಕೆ ಕಿಡಿಕಾರಿದ್ದಾರೆ.

ಕಾಲು ಸಂಕದ ರಸ್ತೆ ಕುಸಿದು ಏಳು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಕನಿಷ್ಠ ಪಾಪ ಪ್ರಜ್ಞೆಯೂ ಇಲ್ಲವೇ ನಿಮಗೆ?. ಆಕಾಶದಲ್ಲಿ ಹಾರಾಡುವ ನಿಮಗೆ ಕಾಲು ಸಂಕದ ಕಷ್ಟ ಅರ್ಥವಾದೀತೆ?, ಮಳೆ, ನೆರೆಯಿಂದ ಕರ್ನಾಟಕ ಕಣ್ಣೀರ ಕಡಲಾಗಿರುವುದು ಕಾಣುತ್ತಿಲ್ಲವೇ?. ನಾನು 2ನೇ ಸಲ ಸಿಎಂ ಆದಾಗ 800 ಕಾಲು ಸಂಕ ಸೇತುವೆಗಳ ನಿರ್ಮಾಣಕ್ಕೆ ಆದೇಶಿಸಿದ್ದೆ. ಅವುಗಳಲ್ಲಿ ಎಷ್ಟು ಪೂರ್ಣಗೊಳಿಸಿದ್ದೀರಿ?. 3 ವರ್ಷಗಳ ನಿಮ್ಮ ಸರ್ಕಾರದಲ್ಲಿ ಇಂತಹ ಎಷ್ಟು ಸೇತುವೆ ನಿರ್ಮಿಸಿದ್ದೀರಿ? ಒಂದು ಮುಗ್ಧ ಸಾವು ನಿಮ್ಮ ಮನ ಕಲಕಲಿಲ್ಲವಲ್ಲಾ?, ನಾಚಿಕೆ ಆಗುವುದಿಲ್ಲವೇ ಉನ್ನತ ಶಿಕ್ಷಣ ಸಚಿವರೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳಿಯಿತು. ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥ್ ನಾರಾಯಣ? ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್‌ ಕಂಪನಿ ಎನ್ನುತ್ತೀರಿ. ನಿಮ್ಮ ಕಂಪನಿಗಳ ಕಥೆ ಬಿಚ್ಚಬೇಕೆ?. ಹೊರಗೆ ಸಾಚಾತನ, ಒಳಗೆ ಸೋಗಲಾಡಿತನ. ಎರಡು ತಲೆಯ ಕುಶಲತೆಯನ್ನು ಎಲ್ಲಿಂದ ಕಲಿತಿರಿ?. ಸಂಘದಿಂದ ಬಂದ ಸಂಸ್ಕಾರವೇ? ಅಥವಾ ತಮ್ಮ ಹಿನ್ನೆಲೆಯೇ ಇದ್ಯಾ?, ನಿಮ್ಮ ನೈಜ ಹಿನ್ನೆಲೆಯ ಪುರಾಣ ಗೊತ್ತಿದ್ದವರಿಗೆ ಇದೇನು ಅಚ್ಚರಿಯಲ್ಲ ಬಿಡಿ. ಜೆಡಿಎಸ್ ಕಂಪನಿ ಇರಲಿ, ನಿಮ್ಮ ಕಂಪನಿಗಳ ಬಗ್ಗೆಯೇ ಕುಮಾರಸ್ವಾಮಿಗೆ ಚೆನ್ನಾಗಿ ಗೊತ್ತು ಎಂಬುದನ್ನು ಮರೆಯಬೇಡಿ. ಚುನಾವಣೆ ಬರಲಿ, ಕಂಪನಿಗಳ ಕಲರವ ಮತ್ತು ʼಠಮ ಠಮ ಠಮʼ ಸದ್ದು ಏನೆಂಬುದನ್ನು ರಾಮನಗರದಲ್ಲಿ ಕೇಳುವಂತೆ ಮಾಡುತ್ತೇನೆ ಎಂದು ಹೆಚ್​​ಡಿಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ನಮ್ಮ ಪಕ್ಷ ಕಾಂಗ್ರೆಸ್, ಜೆಡಿಎಸ್ ನಂತೆ ಪ್ರೈವೇಟ್ ಕಂಪನಿಯಲ್ಲ: ಸಚಿವ ಅಶ್ವತ್ಥ್ ನಾರಾಯಣ

Last Updated : Aug 10, 2022, 2:16 PM IST

ABOUT THE AUTHOR

...view details