ಕರ್ನಾಟಕ

karnataka

By

Published : Jan 7, 2022, 1:43 PM IST

ETV Bharat / city

ಜನತಾ ಜಲಧಾರೆ ಕುರಿತು ಸಭೆ ನಡೆಸುತ್ತಿರುವ ಮಾಜಿ ಸಿಎಂ ಹೆಚ್​​ಡಿಕೆ

ರಾಜ್ಯದ ಜನತೆಗೆ ಜೆಡಿಎಸ್ ಸರ್ಕಾರ ಕೊಟ್ಟ ನೀರಾವರಿ ಯೋಜನೆಗಳನ್ನು ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಸಲಹೆ ನೀಡಿದ್ದಾರೆ. ಅದರ ಜೊತೆಗೆ ಪಕ್ಷದ ಸಾಂಸ್ಥಿಕ ಚುನಾವಣೆ ಕುರಿತು ಮುಖಂಡರಿಂದ ಹೆಚ್​ಡಿಕೆ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ..

hd kumaraswamy meeting on janata jaladhaare program
ಜನತಾ ಜಲಧಾರೆ ಕುರಿತು ಸಭೆ

ಬೆಂಗಳೂರು: ಜೆಡಿಎಸ್​ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ಮತ್ತು ಪಕ್ಷದ ಸಾಂಸ್ಥಿಕ ಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯುತ್ತಿದೆ.

ಜನತಾ ಜಲಧಾರೆ ಕುರಿತು ಮಾಜಿ ಸಿಎಂ ಹೆಚ್‌ಡಿಕೆ ನೇತೃತ್ವದಲ್ಲಿ ಸಭೆ..

ರಾಜ್ಯದ ನೀರಾವರಿ ಸಮಸ್ಯೆಗಳು ಮತ್ತು ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಮುಖಂಡರ ಜೊತೆ ವಿಸ್ತೃತ ಚರ್ಚೆ ನಡೆಸುತ್ತಿದ್ದಾರೆ. ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಎತ್ತಿನಹೊಳೆ ಹಾಗೂ ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಯಾವ ರೀತಿ ಹೋರಾಟ ಮಾಡಬೇಕೆಂಬ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಇದಷ್ಟೇ ಅಲ್ಲ, ಹೆಚ್.ಡಿ. ದೇವೇಗೌಡರು ಸಿಎಂ ಹಾಗೂ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮತ್ತು ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯಕ್ಕೆ ಕೊಟ್ಟ ನೀರಾವರಿ ಯೋಜನೆಗಳ ಬಗ್ಗೆ ಹೆಚ್​ಡಿಕೆ ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.

ಇದನ್ನೂ ಓದಿ:ವಿಶ್ವ ವಿಖ್ಯಾತ ಮೈಸೂರು ದಸರಾ ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಚಿಂತನೆ - ಬಿ.ಆರ್ ಪೂರ್ಣಿಮಾ

ರಾಜ್ಯದ ಜನತೆಗೆ ಜೆಡಿಎಸ್ ಸರ್ಕಾರ ಕೊಟ್ಟ ನೀರಾವರಿ ಯೋಜನೆಗಳನ್ನು ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಸಲಹೆ ನೀಡಿದ್ದಾರೆ. ಅದರ ಜೊತೆಗೆ ಪಕ್ಷದ ಸಾಂಸ್ಥಿಕ ಚುನಾವಣೆ ಕುರಿತು ಮುಖಂಡರಿಂದ ಹೆಚ್​ಡಿಕೆ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದಾರೆ.

ABOUT THE AUTHOR

...view details