ಕರ್ನಾಟಕ

karnataka

ETV Bharat / city

ಪ್ರವಾಹ ಹಾನಿ ಬಗ್ಗೆ ಪ್ರಧಾನಿ ಮಾತನಾಡದಿರುವುದು ರಾಜ್ಯಕ್ಕೆ ಅವಮಾನ: ಎಚ್​ಡಿಕೆ - ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ

ಉತ್ತರ ಕರ್ನಾಟಕದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಕನಿಷ್ಠ ಸೌಜನ್ಯಕ್ಕಾದರೂ ಮಾತನಾಡದಿರುವುದು ರಾಜ್ಯಕ್ಕೆ ಮಾಡಿರುವ ಅವಮಾನ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

hdd
hdd

By

Published : Oct 16, 2020, 10:47 PM IST

ಬೆಂಗಳೂರು: ತೆಲಂಗಾಣ, ಆಂಧ್ರಪ್ರದೇಶದ ಪರಿಸ್ಥಿತಿ ಕುರಿತು ಮಾತನಾಡುವ ಪ್ರಧಾನಿ ನರೇಂದ್ರ ಮೋದಿ, ಅವರದೇ ಪಕ್ಷ ಅಧಿಕಾರ ಇರುವ ನಮ್ಮ ರಾಜ್ಯದ ಜನತೆಯ ಕಷ್ಟದ ಬಗ್ಗೆ ಮಾತನಾಡುವುದಿಲ್ಲ. ಜನತೆಯ ಸಂಕಷ್ಟಕ್ಕೆ ನಾವಿದ್ದೇವೆ ಎಂಬ ವಿಶ್ವಾಸ ಮೂಡಿಸುವ ಕನಿಷ್ಠ ಸೌಜನ್ಯಕ್ಕೂ ಮಾತನಾಡದಿರುವುದು ಕನ್ನಡಿಗರಿಗೆ ಮಾಡಿರುವ ಅನುಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜರಾಜೇಶ್ವರಿನಗರ ಕ್ಷೇತ್ರದ ಅನ್ನಪೂರ್ಣೇಶ್ವರಿನಗರದಲ್ಲಿ ಇಂದು ಸಂಜೆ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೂ, ಪ್ರಧಾನಿಗಳು ಕನಿಷ್ಠ ಸೌಜನ್ಯಕ್ಕೂ ನಾಡಿನ ಜನರಿಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್.ಡಿ. ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಕಳೆದ ವರ್ಷವೂ ದೊಡ್ಡ ಮಟ್ಟದಲ್ಲಿ ನೆರೆ ಹಾವಳಿ ಉಂಟಾಗಿತ್ತು. ಈ ವರ್ಷವೂ ಸಹ ಉಂಟಾಗಿದೆ. ಇದು ಮೂರನೇ ಹಂತದಲ್ಲಿ ಬಂದ ನೆರೆ ಹಾವಳಿಯಾಗಿದೆ. ಉತ್ತರ ಕರ್ನಾಟಕ ಭಾಗಕ್ಕೆ ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ಕೊಟ್ಟಿರುವುದು ಬಿಟ್ಟರೆ ಬೇರೆ ಯಾವ ಸಚಿವರೂ ಆ ಭಾಗದ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಯತ್ನ ಮಾಡಿಲ್ಲ. ರೈತರು ಬೆಳೆ ನಷ್ಟಹೊಂದಿ ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡದಿರುವುದು ನಮ್ಮ ದುರ್ದೈವ ಎಂದರು.

ಪ್ರವಾಹ ಪೀಡಿತ ಸಂಕಷ್ಟಕ್ಕೆ ಸ್ಪಂದಿಸುವಂತೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮತ್ತೊಮ್ಮೆ ಸುದೀರ್ಘ ಪತ್ರ ಬರೆಯಲಾಗುವುದು. ರಾಜ್ಯದಿಂದ 25 ಸಂಸದರನ್ನು ರಾಜ್ಯದ ಜನತೆ ಆಯ್ಕೆ ಮಾಡಿದ್ದಾರೆ. ಅವರು ಕರ್ನಾಟಕ ನಮ್ಮ ಕೈಯಲ್ಲಿದೆ ಎನ್ನುತ್ತಾರೆ. ಆದರೆ, ಪ್ರಧಾನಿ ಮುಂದೆ ನಿಂತು ರಾಜ್ಯಕ್ಕೆ ಬೇಕಾಗಿರುವುದನ್ನು ಕೇಳಿ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮುಂದೆ ಮಾತನಾಡದಿರುವಷ್ಟು ಧೈರ್ಯ ಇಲ್ಲದಿರುವುದನ್ನು ಗಮನಿಸಿದರೆ, ಇವರನ್ನು ಪ್ರಧಾನಿಗಳು ಯಾವ ಮಟ್ಟದಲ್ಲಿ ಇಟ್ಟಿದ್ದಾರೆ ಎಂಬುದನ್ನು ಗಮನಿಸಬಹುದು ಎಂದು ಕಿಡಿಕಾರಿದರು.

ABOUT THE AUTHOR

...view details