ಬೆಂಗಳೂರು: ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ, ಬೀದಿಯಲ್ಲಿ ಇನ್ನೊಂದು ಮುಖ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಕಿಡಿ ಕಾರಿದ್ದಾರೆ. ಇದೇ ವೇಳೆ, ಒಡಕು ರಾಜಕಾರಣ ಬಿಜೆಪಿಯ ನಿತ್ಯ ಕಾಯಕವಾದರೆ, ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ ಎಂದು ಕಟುವಾಗಿ ಟೀಕಿಸಿದ್ದಾರೆ.
ಜೆಡಿಎಸ್ನಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್ಗೆ ಪ್ರತಿಟ್ವೀಟ್ ಮಾಡಿರುವ ಅವರು, ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು 'ಆಪರೇಷನ್ ಕಮಲ'ದ ಮೂಲಕ ರಚನೆ ಮಾಡಿದ ಸರ್ಕಾರಗಳೇ ಸಾಕ್ಷಿ.
ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ.
ಯಡಿಯೂರಪ್ಪ ಕುಟುಂಬ:
- ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ
- ಹಿರಿಮಗ ಲೋಕಸಭೆ ಸದಸ್ಯ
- ಕಿರಿಮಗ ಪಕ್ಷದ ಉಪಾಧ್ಯಕ್ಷ
ಬಳ್ಳಾರಿ ರೆಡ್ಡಿ ಕುಟುಂಬ:
- ಕರುಣಾಕರ ರೆಡ್ಡಿ ಶಾಸಕ
- ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ
- ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ
- ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ
- ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ
- ಸಣ್ಣ ಫಕೀರಪ್ಪ ಕೂಡ ಅವರ ಪೈಕಿ