ಬೆಂಗಳೂರು: ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಆರ್ ರಮೇಶ್ ಕುಮಾರ್ ಅವರು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಉಗ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂವಿಧಾನದ 4ನೇ ಅಂಗ ಮಾಧ್ಯಮ ಎನ್ನುವುದು ಸ್ವಯಂ ಘೋಷಿತ ಸಂವಿಧಾನ ಪಂಡಿತರಿಗೆ ಗೊತ್ತಿಲ್ಲದಿರುವುದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.
ರಮೇಶ್ ಕುಮಾರ್ ನಾಲಿಗೆ ಮೇಲೆ ನಿಯಂತ್ರಣವಿಲ್ಲದ ವ್ಯಕ್ತಿ: ಹೆಚ್.ಡಿ. ಕುಮಾರಸ್ವಾಮಿ - ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್
ಕಲಾಪದಲ್ಲೇ ಮಹಿಳೆಯರ ಬಗ್ಗೆ 'ಕೊಳಕು' ಕಕ್ಕಿದ ಆಸಾಮಿ ರಮೇಶ್ ಕುಮಾರ್ ಅವರಿಗೆ ಮಾಧ್ಯಮ, ಸಂವಿಧಾನದ 4ನೇ ಅಂಗ ಎನ್ನುವುದೇ ಗೊತ್ತಿಲ್ಲದಿರುವುದು ವಿಪರ್ಯಾಸ ಅಂತಾ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ
ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ 'ಕೊಳಕು' ಕಕ್ಕಿದ ಆಸಾಮಿ, ಸ್ವಾತಂತ್ರೋದ್ಯಾನದಲ್ಲಿ ನಾಯಕರ ಸಾಕ್ಷಿಯಾಗಿ 3-4 ತಲೆಮಾರುಗಳಿಗಾಗುವಷ್ಟು ಲೂಟಿ ಹೊಡೆದ ಲೆಕ್ಕ ಕೊಟ್ಟ ವ್ಯಕ್ತಿಯ ಅಸಲಿರೂಪ ಅನಾವರಣಗೊಂಡಿದೆ ಎಂದು ಹೆಚ್ಡಿಕೆ ಟೀಕಿಸಿದ್ದಾರೆ.
ಇದನ್ನೂ ಓದಿ:ಅಧಿಕಾರ ತಂದುಕೊಟ್ಟ ಯುವಕರ ಜೀವಕ್ಕೆ ಗ್ಯಾರಂಟಿ ಕೊಡದಷ್ಟು ಬಿಜೆಪಿ ದುರ್ಬಲವಾಗಿದೆ: ಹೆಚ್ಡಿಕೆ ಟೀಕೆ