ಕರ್ನಾಟಕ

karnataka

ETV Bharat / city

ಕಾಂಗ್ರೆಸ್​​-ಬಿಜೆಪಿ ಗಲಭೆಯನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿವೆ: ಹೆಚ್​ಡಿಕೆ ವಾಗ್ದಾಳಿ

ಕೆ.ಜಿ.ಹಳ್ಳಿ ಗಲಭೆಯ ಕುರಿತು ಮಾತಾನಾಡುವ ಹಕ್ಕು ಕಾಂಗ್ರೆಸ್​​​ ಕಳೆದುಕೊಂಡಿದೆ. ಅಲ್ಲದೆ ಪ್ರವಾಹ ಪರಿಸ್ಥಿತಿಯ ಬಗ್ಗೆ ತಲೆಕೆಡಿಸಿಕೊಳ್ಳದೆ ಸರ್ಕಾರ ಗಲಭೆ ಪ್ರಕರಣದ ತನಿಖೆ ನಡೆಸಲು ಬೀದಿಗೆ ಬಂದಿದೆ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಕೈ, ಕಮಲದ ವಿರುದ್ಧ ಕಿಡಿಕಾರಿದ್ದಾರೆ.

hd-kumaraswamy-statement-on-bangalore-violence
ಹೆಚ್​​. ಡಿ. ಕುಮಾರಸ್ವಾಮಿ

By

Published : Aug 17, 2020, 3:15 PM IST

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್​​ನವರು ಡ್ಯಾಮೇಜ್ ಮಾಡಿಕೊಂಡಿದ್ದಾರೆ. ಅದೇ ಕಾರಣಕ್ಕೆ ಆ ಪಕ್ಷದ ನಾಯಕರಿಗೆ ಪ್ರಕರಣ ಕುರಿತು ಮಾತನಾಡುವ ಧೈರ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳೀದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಇಂದು ನಡೆದ ವಿಡಿಯೋ ಕಾನ್ಫರೆನ್ಸ್​​​​ನಲ್ಲಿ ತಮ್ಮ ನಿವಾಸದಿಂದಲೇ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳೂ ಗಲಭೆಯನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ ಎಂದು ಟೀಕಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿ ಸೃಷ್ಟಿಯಾಗಿದೆ. ಇದರ ಬಗ್ಗೆ ಬಿಜೆಪಿ ನಾಯಕರಿಗೆ ಮಾತನಾಡುವ ನೈತಿಕತೆ ಇಲ್ಲ. ಪ್ರವಾಹದಿಂದ ಜನರು ಸಾಕಷ್ಟು ತೊಂದರೆಗೆ ಸಿಲುಕಿದ್ದಾರೆ. ಈ ವಿಚಾರವಾಗಿ ಮಾತನಾಡದ ಬಿಜೆಪಿ ನಾಯಕರು, ಡಿ.ಜೆ.ಹಳ್ಳಿ ಘಟನೆ ನಡೆದ ಮೇಲೆ ಬೀದಿಗೆ ಬಂದು ಏನೇನೋ ಮಾತನಾಡುತ್ತಿದ್ದಾರೆ. ಆದರೆ ನೆರೆ ಹಾವಳಿ ಬಗ್ಗೆ ಯಾರೂ ಚರ್ಚೆ ನಡೆಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ನಾಲ್ಕು ಸಾವಿರ ಕೋಟಿ ರೂ. ನೆರೆ ನಷ್ಟವಾಗಿದೆ ಎಂದು ಪ್ರಧಾನಿ ಮೋದಿ ಅವರಿಗೆ ತಿಳಿಸಿದೆ. ಆದರೆ ಕಂದಾಯ ಇಲಾಖೆ 885 ಕೋಟಿ ರೂ. ಎಂದು ನಷ್ಟದ ಅಂದಾಜು ಮಾಡಿದೆ. ಇದರಿಂದಲೇ ಗೊತ್ತಾಗುತ್ತೆ ಸರ್ಕಾರ ಹೇಗೆ ನಡೆಯುತ್ತಿದೆ ಎಂಬುದು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ABOUT THE AUTHOR

...view details