ಬೆಂಗಳೂರು: ಶಾಲೆಗೆ ಬಂದ ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡು ಸ್ವಾಗತಿಸಿದ ಸಮಸ್ತ ಶಿಕ್ಷಕ ಬಂಧುಗಳಿಗೆ ಅಭಿನಂದನೆಗಳು. ಮಕ್ಕಳ ಜೊತೆ ಮಕ್ಕಳಾಗಿ ಶಿಕ್ಷಕರು ವಹಿಸುವ ಜವಾವ್ದಾರಿ ಮಹತ್ವದ್ದು. ಕೋವಿಡ್ನಿಂದ ಬಳಲಿದ ಕಲಿಕಾ ವ್ಯವಸ್ಥೆಗೆ ನವಚೈತನ್ಯ ತುಂಬಿದವರೂ ಶಿಕ್ಷಕರೇ. ಅವರ ಸಮಸ್ಯೆ - ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ಉದಾಸೀನ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಕ್ಕಳು ನಲಿಯುತ್ತಾ ಶಾಲೆಗೆ ಬಂದ ದೃಶ್ಯಗಳನ್ನು ಕಂಡು ನನ್ನ ಮನಸ್ಸು ಪುಳಕಿತವಾಗಿದೆ. ನನ್ನ ಬಾಲ್ಯದ ದಿನಗಳು ನೆನಪಾದವು. ಅಪ್ಪ - ಅಮ್ಮನ ಬೆರಳಿಡಿದು ತರಗತಿಗಳತ್ತ ಬಂದ ಚಿಣ್ಣರ ಸಂಭ್ರಮ ಇಡೀ ನಾಡಿಗೆ ಹೊಸಕಳೆ ತಂದಿದೆ ಎಂದು ಹೇಳಿದ್ದಾರೆ.