ಬೆಂಗಳೂರು:ಮೈತ್ರಿ ಧರ್ಮವನ್ನು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಕೂಡ ಮೈತ್ರಿ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿಯಿಲ್ಲ: ಹೆಚ್ಡಿಕೆ ಸ್ಪಷ್ಟನೆ ಈ ಕುರಿತು ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜೊತೆ ಮೈತ್ರಿ ಇಲ್ಲವೆಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ನಿಂದ ಮುಂದಿಟ್ಟಿರುವುದಾದರೂ ಯಾರು?. 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಮನೆ ಬಾಗಿಲಿಗೆ ಹೋಗಿಲ್ಲ.
ಮೈತ್ರಿ ಧರ್ಮವನ್ನು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿಯಿಲ್ಲ: ಹೆಚ್ಡಿಕೆ ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ಪಿ ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಟೀಕಿಸಿದ್ದಾರೆ.
ಮೈತ್ರಿ ಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೆಯೇ ಜೆಡಿಎಸ್ನ ದೇವೇಗೌಡರ ಹೆಸರು ಬಳಸಿ ಆ ಪಕ್ಷದ 'ನಾಯಕ'ರು ಲಾಭ ಮಾಡಿಕೊಳ್ಳುವುದೂ ಬೇಡ ಎಂದು ಹೇಳಿದ್ದಾರೆ.