ಬೆಂಗಳೂರು:ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರ ದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹೊರ ದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡುವ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.