ಕರ್ನಾಟಕ

karnataka

ETV Bharat / city

ರಾಜಸ್ಥಾನ ಟೈಲರ್​ ಶಿರಚ್ಛೇದ.. ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪೈಶಾಚಿಕ ಕೃತ್ಯ ಎಂದ ಹೆಚ್​ಡಿಕೆ - Rajasthan tailor beheading case

ರಾಜಸ್ಥಾನದ ಉದಯ್​ಪುರದಲ್ಲಿ ನಡೆದ ಟೈಲರ್​ ಶಿರಚ್ಛೇದ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದೊಂದು ಪೈಶಾಚಿಕ ಕತ್ಯವೆಂದು ಅವರು ಹೇಳಿದ್ದಾರೆ.

HD Kumarswamy
ಹೆಚ್​ ಡಿ ಕುಮಾರಸ್ವಾಮಿ

By

Published : Jun 29, 2022, 2:28 PM IST

ಬೆಂಗಳೂರು : ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕನ್ಹಯ್ಯ ಲಾಲ್ ಅವರನ್ನು ಹತ್ಯೆ ಮಾಡಿರುವುದನ್ನು ಪಕ್ಷಾತೀತವಾಗಿ ಖಂಡಿಸಲೇಬೇಕು. ಪಾತಕಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಮತ್ತೊಮ್ಮೆ ಇಂಥ ಘಟನೆಗಳು ಮರುಕಳಿಸಲೇಬಾರದು. ರಕ್ಕಸರಷ್ಟೇ ಇಂಥ ಹೇಯ ಕೃತ್ಯ ಎಸಗಲು ಸಾಧ್ಯ. ಕಾನೂನು-ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂಥ ಕ್ರೂರ ಮನಃಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ ಎಂದಿದ್ದಾರೆ.

ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳು ಅಳಿಯುತ್ತವೆ. ಕನ್ಹಯ್ಯ ಅವರ ಕೊಲೆ ಕೇಸ್​ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ ಎಂದು ಅವರು ಒತ್ತಾಯಿಸಿದ್ದಾರೆ.

ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. ಕನ್ಹಯ್ಯ ಅವರ ಸಾವು, 'ಕೊಂದು ವಿಜೃಂಭಿಸುವ ಕಿರಾತಕ ಮನಃಸ್ಥಿತಿಯನ್ನು ಬದಲಿಸಲಿ.' ಅವರ ಕುಟುಂಬದ ಜತೆ ನಾವೆಲ್ಲರೂ ನಿಲ್ಲೋಣ ಎಂದು ಹೆಚ್​ ಡಿಕೆ ಕರೆ ನೀಡಿದ್ದಾರೆ.

ಇದನ್ನೂ ಓದಿ..ರಾಜಸ್ಥಾನ ಟೈಲರ್ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮೌನವೇಕೆ?: ನಳಿನ್ ಕುಮಾರ್ ಕಟೀಲ್

ABOUT THE AUTHOR

...view details