ಬೆಂಗಳೂರು : ಕೋವಿಡ್ ಸೋಂಕಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಂದಿನಂತೆ ತಮ್ಮ ಕರ್ತವ್ಯದಲ್ಲಿ ನಿರತರಾಗಲಿ ಹಾಗೂ ಸಾರ್ವಜನಿಕ ಜೀವನದಲ್ಲಿರುವ ಯಾರೇ ವ್ಯಕ್ತಿಗಳು ತಮ್ಮ ಆರೋಗ್ಯದ ಬಗ್ಗೆ, ಅದರಲ್ಲೂ ಮಾರಕ ವೈರಸ್ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕೆನ್ನುವುದು ನನ್ನ ಕಳಕಳಿ ಎಂದಿದ್ದಾರೆ.
ಬಿಎಸ್ವೈ ಹಾರೈಕೆ :ಮುಖ್ಯಮಂತ್ರಿಗಳು ಕೊರೊನಾ ಸೋಂಕಿನಿಂದ ಶೀಘ್ರ ಚೇತರಿಕೆ ಕಾಣುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ವೈ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಲಿ, ಮತ್ತೆ ಎಂದಿನಂತೆ ತಮ್ಮ ಕರ್ತವ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿಗಳ ಸಂಪುಟ ಸಹೋದ್ಯೋಗಿಗಳು ಮತ್ತು ರಾಜ್ಯ ಬಿಜೆಪಿ ನಾಯಕರು ಕೂಡಾ ಸಿಎಂ ಬೊಮ್ಮಾಯಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಇದನ್ನೂ ಓದಿ:ಚಂಪಾ ಅಂತ್ಯಕ್ರಿಯೆಗೆ ತೆರಳಿದ್ದ ಸಿಎಂ ಬೊಮ್ಮಾಯಿಗೆ ವಕ್ಕರಿಸಿತು ಕೊರೊನಾ!