ಕರ್ನಾಟಕ

karnataka

By

Published : Jan 25, 2020, 11:39 AM IST

Updated : Jan 25, 2020, 11:49 AM IST

ETV Bharat / city

ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ: ಟ್ವೀಟ್ ಮೂಲಕ ಹೆಚ್​ಡಿಕೆ ಆಕ್ರೋಶ

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ ಎಂದು ಸರಣಿ ಟ್ವೀಟ್​ಗಳ ಮೂಲಕ ಹೆಚ್​.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

There is a conspiracy to kill me told kumarswamy
ಹೊಸ ಬಾಂಬ್ ಸಿಡಿಸಿದ ಹೆಚ್​ಡಿಕೆ

ಬೆಂಗಳೂರು: ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಕೇಳಿದ್ದಾರೆ.

ಇದನ್ನೂ ಓದಿ...ಹೆಚ್​​ಡಿಕೆ, ಭಗವಾನ್, ನಿಜಗುಣಾನಂದ ಶ್ರೀ ಸೇರಿ 15 ಜನರನ್ನು ಹತ್ಯೆಗೈಯುವುದಾಗಿ ಬೆದರಿಕೆ ಪತ್ರ!

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ. ನಿಮ್ಮ ಜೀನ್​​ಗಳು ಪಾಕಿಸ್ತಾನದಲ್ಲಿರಬಹುದು ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಹೆಚ್​ಡಿಕೆ

'ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು' ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಬಿಜೆಪಿಗರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಹೆಚ್​ಡಿಕೆ

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೆ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಕಿಡಿಕಾರಿದ್ದಾರೆ.

Last Updated : Jan 25, 2020, 11:49 AM IST

ABOUT THE AUTHOR

...view details