ಬೆಂಗಳೂರು:ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಅತ್ಯಮೂಲ್ಯ. ಮಾನಸಿಕ ಒತ್ತಡದಿಂದಾಗಿ ಹೆಡ್ ಕಾನ್ಸ್ಟೇಬಲ್ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ (44) ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ಟೇಬಲ್.
ಮಾನಸಿಕ ಒತ್ತಡದಿಂದ ನೇಣು ಬಿಗಿದುಕೊಂಡ ಹೆಡ್ಕಾನ್ಸ್ಟೇಬಲ್ - ಮಾನಸಿಕ ಒತ್ತಡಿಂದ ಹೆಡ್ಕಾನ್ಸ್ಟೇಬಲ್ ಆತ್ಮಹತ್ಯೆ
ಮಾನಸಿಕ ಒತ್ತಡದಿಂದ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸಿಕ ಒತ್ತಡದಿಂದ ನೇಣು ಬಿಗಿದುಕೊಂಡ ಹೆಡ್ಕಾನ್ಸ್ಟೇಬಲ್
ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೇ ರಜೆಯಲ್ಲಿದ್ದರು. ಶುಕ್ರವಾರ ಮಂಜುನಾಥ್ ಪತ್ನಿ ಮತ್ತು ಮಕ್ಕಳು ತುಮಕೂರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೆಸರಘಟ್ಟ ಬಳಿ ಮರಕ್ಕೆ ನೇಣು ಬಿಗಿದುಕೊಂಡ ಮಂಜುನಾಥ್ ಸಾವನ್ನಪ್ಪಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಇದನ್ನೂ ಓದಿ: ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ: ಪತ್ನಿ, ಮಕ್ಕಳು ಮನೆಯಲ್ಲಿರುವಾಗಲೇ ಕೃತ್ಯ!)