ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನೇ ದಿನೆ ಹೆಚ್ಚಾಗುತ್ತಿದ್ದು, ಇತ್ತ ಹೋಮ್ ಕ್ವಾರಂಟೈನ್ಗೆ ಒಳಪಟ್ಟವರು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದು, ಸೋಂಕು ಹರಡುವಿಕೆ ತಡೆಗಟ್ಟಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ.
ಕೊರೊನಾ ಶಂಕಿತರ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಇಲಾಖೆ ವಾಹನಗಳು ಸಜ್ಜು - ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ
ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದ್ದು, ಕೊರೊನಾ ಶಂಕಿತರ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಇಲಾಖೆ ವಾಹನಗಳು ಸಜ್ಜಾಗಿವೆ.
ಆರೋಗ್ಯ ಇಲಾಖೆ ವಾಹನಗಳು
ಕೊರೊನಾ ಶಂಕಿತರ ಮನೆಗಳಿಗೆ ಭೇಟಿ ನೀಡಲು ಆರೋಗ್ಯ ಇಲಾಖೆ ವಾಹನಗಳು ಸಜ್ಜಾಗಿವೆ. ಕೊವಿಡ್ ಸ್ಕ್ವಾಡ್ ಸ್ಟಿಕ್ಕರ್ ಅಂಟಿಸಿಕೊಂಡ ವಾಹನಗಳು ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿಯ ಆರೋಗ್ಯ ಇಲಾಖೆ ಬಳಿ ಸಾಲಾಗಿ ವಾಹನಗಳು ನಿಂತಿದ್ದು, ಶಂಕಿತರ ಮನೆಗಳಿಗೆ ಭೇಟಿ ನೀಡಲು ಸಿಬ್ಬಂದಿ ಸಜ್ಜಾಗಿದ್ದಾರೆ.
ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದ್ದು, ಈವರೆಗೂ ಒಂದು ಸಾವು ಸಂಭವಿಸಿದೆ.