ಬೆಂಗಳೂರು:ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೆ ಮುಷ್ಕರ, ಬಂದ್ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದು ಸರಣಿ ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಸುಧಾಕರ್ ಕಿಡಿಕಾರಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ. ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೆ ಮುಷ್ಕರ, ಬಂದ್ಗಳಿಗೆ ಕರೆ ನೀಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ಉಂಟಾಗಿದೆ. ಆದರೆ ಈಗ ಪ್ರಚೋದನೆಗೆ ಒಳಗಾಗದೆ ಮರಳಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದ ಎಂದು ಸಚಿವರು ಹೇಳಿದ್ದಾರೆ.