ಕರ್ನಾಟಕ

karnataka

ETV Bharat / city

ನಿವೃತ್ತ ಸರ್ಕಾರಿ ನೌಕರರಿಗೂ ಆರೋಗ್ಯ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ - Basavaraj Bommai

ಜಾಗತೀಕರಣದ, ಉದಾರೀಕರಣ, ಖಾಸಗೀಕರಣವಾದ ಬಳಿಕ ಅಂತಃಕರಣ ಮರೆತ್ತಿದ್ದೇವೆ. ಹೀಗಿರುವ ಕಾಲದಲ್ಲಿ ಜನಪರವಾಗಿ ಕೆಲಸ ಮಾಡಬೇಕು. ಆಗ ಮಾತ್ರ ಕಲ್ಯಾಣ ರಾಜ್ಯ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Health Scheme
ಬಸವರಾಜ ಬೊಮ್ಮಾಯಿ

By

Published : Jul 8, 2022, 3:44 PM IST

ಬೆಂಗಳೂರು: ಸರ್ಕಾರಿ ನೌಕರರಿಗೆ ಇರುವಂತೆ ನಿವೃತ್ತ ಸರ್ಕಾರಿ ನೌಕರರಿಗೂ ಆರೋಗ್ಯ ಯೋಜನೆಯ ವಿಸ್ತರಣೆ ಮಾಡಲಾಗುವುದು. ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ಜಾರಿಗೊಳಿಸಬೇಕು ಎನ್ನುವ ಬೇಡಿಕೆ ಬಹಳ ದಿನದಿಂದ ಇದೆ, ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತಿ ಎನ್ನುವುದು ಸರ್ಕಾರದ ಕಾನೂನಿನ ಅನುಸಾರ ಅಷ್ಟೇ. ವ್ಯಕ್ತಿಗೆ ನಿವೃತ್ತಿ ಎನ್ನುವುದು ಮನಸ್ಥಿತಿ. ಕೆಲವರು ನೌಕರಿಯಲ್ಲಿದ್ದೆ ನಿವೃತ್ತಿಯಾಗುತ್ತಾರೆ. ಇನ್ನು ಕೆಲವು ನಿವೃತ್ತ ನೌಕರರು ಇತರರಿಗೆ ಮಾರ್ಗದರ್ಶನ ಮಾಡುತ್ತಾರೆ. ಈಗಲೂ ಕ್ರಿಯಾಶೀಲರಾಗಿದ್ದಾರೆ. ಮಾನಸಿಕವಾಗಿ ನಿವೃತ್ತರಾಗದವರು ಜೀವನದಲ್ಲಿ ಎಂದೂ ನಿವೃತ್ತರಾಗುವುದಿಲ್ಲ ಎಂದರು.

ಪ್ರಗತಿಯ ಚಕ್ರ ತಿರುಗಲು ಪ್ರಾಮಾಣಿಕವಾಗಿ ಸೇವೆ ಅಗತ್ಯ: ಆಡಳಿತದ ವಿಚಾರದಲ್ಲಿ ಕರ್ನಾಟಕ ಮುಂದಿದೆ, ಇದಕ್ಕೆ ನಿವೃತ್ತ ನೌಕರರ ಕೊಡುಗೆಯೂ ಬಹಳಷ್ಟಿದೆ. ಆಡಳಿತ ಚಕ್ರ ಸುಗಮವಾಗಿ ಸಾಗಲು ಸರ್ಕಾರಿ ನೌಕರರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸಾಧ್ಯ. ಇಲ್ಲದಿದ್ದರೆ ಪ್ರಗತಿಯ ಚಕ್ರ ಮುಂದುವರೆಯುವುದಿಲ್ಲ. ನಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ನಡೆದರೆ ಸುಲಭವಾಗಿ ಆಡಳಿತ ಚಕ್ರ ಮುಂದುವರೆಯುತ್ತದೆ ಎಂದರು.

ಜನಪರವಾಗಿ ಕೆಲಸ ಮಾಡಬೇಕು:ಆಧುನಿಕ ತಂತ್ರಜ್ಞಾನ, ತಂತ್ರಾಂಶ ಬಳಕೆ, ಇನ್ನಷ್ಟು ಪ್ರಾಮಾಣಿಕವಾಗಿ, ದಕ್ಷತೆಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಜಾಗತೀಕರಣದ, ಉದಾರೀಕರಣ, ಖಾಸಗೀಕರಣವಾದ ಬಳಿಕ ಅಂತಃಕರಣ ಮರೆತ್ತಿದ್ದೇವೆ. ಹೀಗಿರುವ ಕಾಲದಲ್ಲಿ ಜನಪರವಾಗಿ ಕೆಲಸ ಮಾಡಬೇಕು. ಆಗ ಮಾತ್ರ ಕಲ್ಯಾಣ ರಾಜ್ಯ ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ:ಪರಿಸರ ರಾಯಭಾರಿಯಾಗಿ ಸಾಲು ಮರದ ತಿಮ್ಮಕ್ಕ ಆಯ್ಕೆ: ರಾಜ್ಯ ಸಚಿವ ಸಂಪುಟ ಸ್ಥಾನಮಾನ ನೀಡಿ ಆದೇಶ

ABOUT THE AUTHOR

...view details