ಬೆಂಗಳೂರು/ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗಿ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ.
ಗಾಳಿ ಸಹಿತ ಧಾರಾಕಾರ ಮಳೆ... ಬೆಂಗಳೂರಲ್ಲಿ ಧರೆಗುರುಳಿದ ವಿದ್ಯುತ್ ಕಂಬ, ಮರಗಳು - bangalore
ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಗುತ್ತಿದ್ದು, ಸಿಲಿಕಾನ್ ಸಿಟಿಯ ಕೆಲವೆಡೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿವೆ.
ಬೆಂಗಳೂರು, ಚಿಕ್ಕಮಗಳೂರು
ಬೆಂಗಳುರಿನ ಬನಶಂಕರಿ, ಜಯನಗರ, ಜೆಪಿ ನಗರ ಬೊಮ್ಮನಹಳ್ಳಿ, ರಾಜಭವನ, ಮೇಜಸ್ಟಿಕ್ ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ ಸೇರಿ ವಿವಿಧೆಡೆ ಭಾರಿ ಮಳೆಯಾಗಿ, ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ.
ಇನ್ನು ಚಿಕ್ಕಮಗಳೂರಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದಿದ್ದು, ರಸ್ತೆಗಳಲ್ಲಿ ನೀರು ನಿಂತಿರುವ ಕಾರಣ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮೇಲ್ಮೈ ಸುಳಿಗಾಳಿ ಹಿನ್ನೆಲೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.