ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಮಂಗಾರು ಪ್ರವೇಶವಾದ ಬಳಿಕ ಇದೇ ಮೊದಲ ಬಾರಿಗೆ ಉತ್ತಮ ಮಳೆಯಾಗಿದೆ.
ಹಾಗೆಯೇ ಇನ್ನೂ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್( ಹಳದಿ) ಹಾಗೂ ನಾಳೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇವತ್ತಿನ ಮುನ್ಸೂಚನೆ ನೋಡಿದರೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಸುಮಾರು 20 ಸೆಂಟಿ ಮೀಟರ್ ಮಳೆ ಬೀಳಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಹಾಗೆಯೇ ಮಲೆನಾಡಿನ ಜಿಲ್ಲೆಯಲ್ಲೂ ಸಾಧಾರಣ ಹಾಗೂ ಕೆಲವೆಡೆ ಭಾರಿ ಮಳೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಸಾಧಾರಣ ಮತ್ತು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇಲ್ಲ ಎಂದರು.
ಇಂದು ಮತ್ತು ನಾಳೆ ಕರಾವಳಿಯಲ್ಲಿ ತೀವ್ರ ಮಳೆ ಸುರಿಯಲಿದೆ. ಮತ್ತು 13, 14 ರವರೆಗೂ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ. ಎರಡು ದಿನದ ಬಳಿಕ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಲಿದ್ದು, ಈ ವಾರದಲ್ಲಿ ವಾಡಿಕೆಯಷ್ಟು ಮಳೆಯಾಗುತ್ತದೆ ಎಂದರು.
ಮಳೆ ಪ್ರಮಾಣ ಕರ್ನಾಟಕ ನಕ್ಷೆಯಲ್ಲಿ ದಾಖಲಾಗಿರುವುದು ಕೆಲವೆಡೆ ಗುಡುಗು ಸಿಡಿಲಿನೊಂದಿಗೆ ಮಳೆ ಸುರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿಯಲ್ಲಿ 239 ಮಿ.ಮೀ (ಮಿಲಿ ಮೀಟರ್), ಉತ್ತರ ಕನ್ನಡದ ಅಂಕೋಲಾದಲ್ಲಿ 148, ಶಿವಮೊಗ್ಗ 118, ವಿಜಯಪುರ 98, ರಾಯಚೂರು 96, ದಕ್ಷಿಣ ಕನ್ನಡ 92.5 ಮಿ.ಮೀ ಹಾಗೂ ಕಲಬುರಗಿ, ಕೊಪ್ಪಳ, ಬೀದರ್, ಬಳ್ಳಾರಿ ರಾಮನಗರದಲ್ಲಿಯೂ ಧಾರಾಕಾರ ಮಳೆ ಸುರಿದಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಮಳೆಯ ಪ್ರಮಾಣ ಯಾದಗಿರಿ, ಹಾಸನ, ಚಿಕ್ಕಮಗಳೂರು, ಕೊಡಗಿನಲ್ಲಿ ಸಾಧಾರಣ ಮಳೆಯಾಗಿದ್ದು, ಉಳಿದೆಡೆ ಸಾಧಾರಣಕ್ಕಿಂತಲೂ ಕಡಿಮೆ ಮಳೆ ಬಿದ್ದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ವೆಬ್ಸೈಟ್ ಮಾಹಿತಿ ನೀಡಿದೆ.
ಭಾರತದಲ್ಲಿ ಸುರಿದ ಮಳೆಯ ಪ್ರಮಾಣ