ಕರ್ನಾಟಕ

karnataka

ETV Bharat / city

ವಾಯುಭಾರ ಕುಸಿತ: ಸೆಪ್ಟೆಂಬರ್ 2ರವರೆಗೆ ರಾಜ್ಯದ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 30ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 31ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

rain
ಭಾರಿ ಮಳೆ

By

Published : Aug 30, 2021, 8:13 AM IST

ಬೆಂಗಳೂರು:ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಇಂದಿನಿಂದ ಸೆಪ್ಟೆಂಬರ್ 2ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗುಸಹಿತ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆ ನಿರೀಕ್ಷೆ ಇದೆ. ಆಗಸ್ಟ್ 30ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 31ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲೂ ಇಂದು, ನಾಳೆ ಮಳೆ

ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆಗಸ್ಟ್ 30 ಹಾಗೂ 31ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಉಷ್ಣಾಂಶ 26 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಮುಂಗಾರು ಭಾನುವಾರ ರಾಜ್ಯಾದ್ಯಂತ ಚುರುಕಾಗಿತ್ತು. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗಿದೆ ಎನ್ನುವ ಮಾಹಿತಿ ದೊರೆತಿದೆ.

ಹಲವೆಡೆ ಭಾರಿ ಮಳೆ:ಕೋಟದಲ್ಲಿ 11 ಸೆಂ.ಮೀ, ಕೊಪ್ಪಳದ ಬೇವೂರು, ಉಡುಪಿಯಲ್ಲಿ ತಲಾ 10 ಸೆಂ.ಮೀ, ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ 9 ಸೆಂ.ಮೀ, ಮಾಣಿಯಲ್ಲಿ 8 ಸೆಂ.ಮೀ, ಉಡುಪಿಯ ಕೊಂಡಾಪುರ, ಸಿದ್ದಾಪುರ, ಬ್ರಹ್ಮಾವರ, ಕಾರ್ಕಳ, ಉತ್ತರ ಕನ್ನಡದ ಶಿರಾಲಿ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ ತಲಾ 7 ಸೆಂ.ಮೀ, ಉಡುಪಿಯ ಕೊಲ್ಲೂರು, ಮಂಗಳೂರು, ಬಾಗಲಕೋಟೆಯ ಬಿಳಗಿ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 6 ಸೆಂ.ಮೀ, ದಕ್ಷಿಣ ಕನ್ನಡದ ಪಣಂಬೂರು, ಧರ್ಮಸ್ಥಳ, ಪುತ್ತೂರು, ಹೊನ್ನಾವರ, ಬಾಗಲಕೋಟೆಯ ಹುನಗುಂದ, ಚಿಕ್ಕಮಗಳೂರಿನ ಕೊಟ್ಟಿಗೆಹಾರ, ದಾವಣಗೆರೆಯ ತೆಲಿಗಿಯಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ABOUT THE AUTHOR

...view details