ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ನಾಲ್ಕು ದಿನಗಳ ಕಾಲ ಹೆಚ್ಚಿ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹೇಳಿದೆ.
ರಾಜ್ಯಾದ್ಯಂತ ಜುಲೈ 4ರ ವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - ಹವಾಮಾನ ಇಲಾಖೆ
ಸದ್ಯ ಮಡಿಕೇರಿಯ ಸೋಮವಾರಪೇಟೆ, ಜೋಡುಪಾಲ, ಮದೆನಾಡು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ.

ರಾಜ್ಯಾದ್ಯಂತ ಜುಲೈ 4 ರವರೆಗೆ ಭಾರಿ ಮಳೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯ ಮಡಿಕೇರಿಯ ಸೋಮವಾರಪೇಟೆ, ಜೋಡುಪಾಲ, ಮದೆನಾಡು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ