ಬೆಳಗಾವಿ:ಡಿ.ಕೆ.ಶಿವಕುಮಾರ್ ಜೈಲಿನಿಂದ ಹೊರ ಬಂದ ಹಿನ್ನೆಲೆ ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡುತ್ತಿದ್ದು, ಇಂದು ಬೆಳಗಾವಿ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಹೆಬ್ಬಾಳ್ಕರ್ ಸಹೋದರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿ 105 ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ಜೈಲಿಂದ ಹೊರ ಬಂದ ಡಿಕೆಶಿ: ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು ಹಾಗೂ ಹೆಬ್ಬಾಳ್ಕರ್ ಸಹೋದರ - ಡಿ.ಕೆ ಶಿವಕುಮಾರ ಬಿಡುಗಡೆಗೆ ಬೆಳಗಾವಿಯಲ್ಲಿ ಸಂಭ್ರಮಾಚರಣೆ
ಡಿ.ಕೆ.ಶಿವಕುಮಾರ್ ಜೈಲಿನಿಂದ ಹೊರ ಬಂದ ಹಿನ್ನೆಲೆ ಅವರ ಅಭಿಮಾನಿಗಳು ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡುತ್ತಿದ್ದು, ಇಂದು ಬೆಳಗಾವಿ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿ ಹೆಬ್ಬಾಳ್ಕರ್ ಸಹೋದರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿ 105 ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.
ನಗರದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಒಡೆದು ಸಿಹಿ ಹಂಚಿ ದೇವರಿಗೆ ಹರಕೆ ತೀರಿಸಿದರು. ಇದೇ ಸಂದರ್ಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಕೂಡ ಭಾಗವಹಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ತಿಳಿಸಿದರು.
ನಂತರ ಮಾತನಾಡಿದ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್, ಡಿ.ಕೆ.ಶಿವಕುಮಾರ್ ಒಬ್ಬ ಪ್ರಾಮಾಣಿಕ ರಾಜಕಾರಣಿ. ಕಾಂಗ್ರೆಸ್ ಪಕ್ಷಕ್ಕೆ ಅವರ ಕೊಡುಗೆ ಅಪಾರವಾಗಿದೆ. ಜೈಲಿನಿಂದ ಹೊರ ಬಂದ ಕಾರಣ ದೇವರಿಗೆ ಪೂಜೆ ಮಾಡಲಾಗಿದೆ. ಜೊತೆಗೆ ಅವರ ಮುಂದಿನ ಕಾನೂನು ಹೋರಾಟಗಳಲ್ಲಿ ಜಯಶಾಲಿ ಆಗಲಿ ಎಂದು ಹಾರೈಸಿದರು.
TAGGED:
D K Shivkumar Release news