ಬೆಂಗಳೂರು:ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ.
ಎಸ್ಎಸ್ಎಲ್ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭ - ಎಸ್ಎಸ್ಎಲ್ಸಿ ಫಲಿತಾಂಶ 2022
ಎಸ್ಎಸ್ಎಲ್ಸಿ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಆತಂಕಕ್ಕೆ ಒಳಗಾಗದಿರಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭ
ಇದನ್ನೂ ಓದಿ:ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್
ಮಾನಸಿಕ ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.