ಕರ್ನಾಟಕ

karnataka

ETV Bharat / city

ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ : ವರದಿ ಕೇಳಿದ ಹೈಕೋರ್ಟ್

ದುರ್ನಡತೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಸರ್ಕಾರಿ ನೌಕರರ ವಿರುದ್ಧದ ವಿಚಾರಣೆ ನಡೆಸಿ ಕ್ರಮ ಜರುಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು 'ಲೋಕಾಯುಕ್ತ ಕಾಯ್ದೆ-1984'ರ ಸೆಕ್ಷನ್ 12(1) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ..

High court
ಹೈಕೋರ್ಟ್

By

Published : Oct 27, 2021, 2:59 PM IST

ಬೆಂಗಳೂರು :ಭ್ರಷ್ಟ ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತರು ಸಲ್ಲಿಸಿರುವ ವಿಚಾರಣಾ ವರದಿ ಮೇರೆಗೆ ಸಂಬಂಧಪಟ್ಟ ಸರ್ಕಾರಿ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಅನುಪಾಲನಾ ವರದಿಯನ್ನು ಸರ್ಕಾರ ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, 24 ಇಲಾಖೆಗಳ ಪೈಕಿ 19 ಇಲಾಖೆಗಳು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸಿವೆ.

ಕಂದಾಯ ಇಲಾಖೆ ಸೇರಿದಂತೆ 4 ಇಲಾಖೆಗಳು ವರದಿ ಸಲ್ಲಿಸಬೇಕಿದೆ. ಕಂದಾಯ ಇಲಾಖೆಯ ಮಾಹಿತಿ ಹೆಚ್ಚಿದ್ದು, ಬಾಕಿ ಇಲಾಖೆಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ನವೆಂಬರ್ ಅಂತ್ಯಕ್ಕೆ ಸಂಪೂರ್ಣ ಮಾಹಿತಿ ಪಡೆದು ಅನುಪಾಲನಾ ವರದಿ ಸಲ್ಲಿಸುತ್ತೇವೆ. ಅದಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪುರಸ್ಕರಿಸಿದ ಪೀಠ, ಅನುಪಾಲನ ವರದಿ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿ.2ಕ್ಕೆ ಮುಂದೂಡಿತು.

ದುರ್ನಡತೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿರುವ ಸರ್ಕಾರಿ ನೌಕರರ ವಿರುದ್ಧದ ವಿಚಾರಣೆ ನಡೆಸಿ ಕ್ರಮ ಜರುಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು 'ಲೋಕಾಯುಕ್ತ ಕಾಯ್ದೆ-1984'ರ ಸೆಕ್ಷನ್ 12(1) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರ ಕೈಗೊಂಡ ಕ್ರಮಗಳ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮತ್ತು ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಲು ಡಿಪಿಎಆರ್ ಜಂಟಿ (ವಿಚಕ್ಷಣ) ಕಾರ್ಯದರ್ಶಿಯನ್ನು ನೋಡೆಲ್ ಅಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಿಸಿದೆ.

ABOUT THE AUTHOR

...view details