ಕರ್ನಾಟಕ

karnataka

ETV Bharat / city

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿನ ಕಾಮಗಾರಿ ಸ್ಥಗಿತಗೊಳಿಸಿದ್ದಕ್ಕೆ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್ - ಬಿಜೆಪಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನವ ಬೆಂಗಳೂರು ಯೋಜನೆ ಅಡಿ ಕೈಗೊಂಡಿದ್ದ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು..

hc
hc

By

Published : Nov 16, 2021, 9:24 PM IST

ಬೆಂಗಳೂರು :ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ (Congress-JDS Coalition Government) ಅವಧಿಯಲ್ಲಿ ಘೋಷಿಸಿದ್ದ ನವ ಬೆಂಗಳೂರು ಯೋಜನೆ ಕಾಮಗಾರಿ ಮತ್ತು ಅವುಗಳ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿದೆ.

ಸಮ್ಮಿಶ್ರ ಸರ್ಕಾರದ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಂದಿನ ಸಿಎಂ ಬಿಎಸ್​ವೈ (BS Yeddyurappa) ಪತ್ರ ಆಧರಿಸಿ ನವ ಬೆಂಗಳೂರು ಯೋಜನೆ ಸ್ಥಗಿತಗೊಳಿಸಿದ ಆದೇಶ ಪ್ರಶ್ನಿಸಿ ನಗರದ ನವೀನ್ ಕುಮಾರ್ ಎಂಬುವರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ನವ ಬೆಂಗಳೂರು ಯೋಜನೆ ಅಡಿ ಕೈಗೊಂಡಿದ್ದ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿದರು.

ಸರ್ಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿ, ಅರ್ಜಿಗೆ ಸಂಬಂಧಿಸಿದಂತೆ ವಿವರವಾದ ಆಕ್ಷೇಪಣೆ ಸಲ್ಲಿಸಲಿದ್ದೇವೆ. ಅದಕ್ಕೆ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಮತ್ತು ಬಿಬಿಎಂಪಿಗೆ 3 ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ :ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ (Congress-JDS Coalition Government) ಅವಧಿಯಲ್ಲಿ ಮುಖ್ಯಮಂತ್ರಿಗಳ ನವ ಬೆಂಗಳೂರು ಯೋಜನೆ ಅಡಿ ಬಿಬಿಎಂಪಿ ವ್ಯಾಪ್ತಿಯಲ್ಲಿ 9 ಸಾವಿರ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಿಎಂ ಯಡಿಯೂರಪ್ಪ 2019ರ ಆಗಸ್ಟ್ 3ರಂದು ನಗರಾಭಿವದ್ಧಿ ಇಲಾಖೆಗೆ ಬರೆದ ಟಿಪ್ಪಣಿ ಆಧರಿಸಿ ಕಾಮಗಾರಿಗಳು ಹಾಗೂ ಟೆಂಡರ್‌ಗಳನ್ನು ಸ್ಥಗಿತಗೊಳಿಸಿ ಆ.5ರಂದು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿರುವ ಅರ್ಜಿದಾರರು, ಕಾಮಗಾರಿ ಮುಂದುವರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

('ಹೇಗಾದ್ರೂ ಮಾಡಿ ನನ್ನ ಕಳುಹಿಸಿ, ಅವನನ್ನು ಕರೆಯಿಸಿಕೊಂಡು ಬಿಡಿ ಪ್ಲೀಸ್​': ರಾಘಣ್ಣನ ಕಣ್ಣೀರು)

ABOUT THE AUTHOR

...view details