ಕರ್ನಾಟಕ

karnataka

ETV Bharat / city

ವೈದ್ಯಕೀಯ ಕೋರ್ಸ್​ಗಳ ಶುಲ್ಕ ಹೆಚ್ಚಳ: ಸರ್ಕಾರದಿಂದ ಮಾಹಿತಿ ಕೇಳಿದ ಹೈಕೋರ್ಟ್​ - ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಶುಲ್ಕ

ಕಾಲೇಜುಗಳ ವೈದ್ಯ ಹಾಗೂ ದಂತ ವೈದ್ಯ ಸ್ನಾತಕೋತ್ತರ ಪದವಿ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಿಸಿರುವುದು ನಿಜವೇ ಎಂದು ಹೈಕೋರ್ಟ್ ಮಾಹಿತಿ ಕೇಳಿದೆ.

high court asks about PG medical, dental fee hike
ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳ

By

Published : Jun 15, 2020, 10:33 PM IST

ಬೆಂಗಳೂರು: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಕೋರ್ಸ್​ಗಳ ಶುಲ್ಕ ಹೆಚ್ಚಳ ಮಾಡಿದ್ದರೆ ಆ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಹುಬ್ಬಳ್ಳಿಯ ದಿವಂಗತ ಜಿ.ಬಿ.ಕುಲಕರ್ಣಿ ಸ್ಮಾರಕ ಕಾನೂನು ಸಂಸ್ಥೆಯ ಅಧ್ಯಕ್ಷ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್​​.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರಿ ವಕೀಲರನ್ನು ಪ್ರಶ್ನಿಸಿದ ಪೀಠ, ಅರ್ಜಿದಾರರು ಲಿಖಿತವಾಗಿ ತಿಳಿಸಿರುವಂತೆ 2020-21ನೇ ಸಾಲಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ವೈದ್ಯ ಹಾಗೂ ದಂತ ವೈದ್ಯ ಸ್ನಾತಕೋತ್ತರ ಪದವಿ ಕೋರ್ಸ್​ಗಳ ಶುಲ್ಕ ಹೆಚ್ಚಿಸಿರುವುದು ನಿಜವೇ ಎಂದು ಕೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಮಾಹಿತಿ ಪಡೆದು ತಿಳಿಸುವುದಾಗಿ ಹೇಳಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಮಾಹಿತಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ವೈದ್ಯಕೀಯ ಸ್ನಾತಕೋತ್ತರ ಪದವಿ ಕೋರ್ಸ್​ಗಳ ಶುಲ್ಕ ಹೆಚ್ಚಳ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿದಾರರು, ಈ ಆದೇಶವನ್ನು ರದ್ದುಪಡಿಸಬೇಕು. ಶುಲ್ಕ ನಿಯಂತ್ರಣ ಸಮಿತಿಗೆ ತಕ್ಷಣ ಅಧ್ಯಕ್ಷರನ್ನು ನೇಮಕ ಮಾಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಈಗಾಗಲೇ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ನಿಯಂತ್ರಣ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆಯೂ ನಿರ್ದೇಶಿಸಿದೆ.

ABOUT THE AUTHOR

...view details