ಕರ್ನಾಟಕ

karnataka

ETV Bharat / city

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ಅಲಿಖಾನ್​ಗೆ ಹೈಕೋರ್ಟ್​ನಿಂದ ಜಾಮೀನು - ಮನ್ಸೂರ್ ಅಲಿಖಾನ್ ಗೆ ಹೈಕೋರ್ಟ್ ಜಾಮೀನು

ಜಾಮೀನು ಕೋರಿ ಮನ್ಸೂರ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ವಿಚಾರಣೆ ನಡೆಸಿದರು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ, ಆರೋಪಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಫೆ. 12ರಿಂದ ಅನ್ವಯವಾಗುವಂತೆ ಜಾಮೀನು ಮಂಜೂರು ಮಾಡಿ ಆದೇಶಿಸಿತು.

high-court-bail-for-mansoor-ali-khan
ಮನ್ಸೂರ್ ಅಲಿಖಾನ್

By

Published : Feb 4, 2021, 9:59 PM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಸಿಬಿಐ ದಾಖಲಿಸಿದ್ದ ಮತ್ತೊಂದು ಪ್ರಕರಣದಲ್ಲಿ ಪ್ರಮುಖ ಆರೋಪಿ ಮೊಹಮ್ಮದ್ ಮನ್ಸೂರ್ ಅಲಿ ಖಾನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಮನ್ಸೂರ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ವಿಚಾರಣೆ ನಡೆಸಿದರು. ಕೆಲ ಕಾಲ ವಾದ-ಪ್ರತಿವಾದ ಆಲಿಸಿದ ಪೀಠ, ಆರೋಪಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಫೆ. 12ರಿಂದ ಅನ್ವಯವಾಗುವಂತೆ ಜಾಮೀನು ಮಂಜೂರು ಮಾಡಿ ಆದೇಶಿಸಿತು.

ಐಎಂಎ ವಂಚನೆ ಆರೋಪ ಸಂಬಂಧ ಮನ್ಸೂರ್ ಖಾನ್ ವಿರುದ್ಧ ಸಿಬಿಐ ಮೂರು ಮತ್ತು ಜಾರಿ ನಿರ್ದೇಶನಾಲಯ ಒಂದು ಪ್ರಕರಣ ದಾಖಲಿಸಿದ್ದವು. ಸಿಬಿಐ ದಾಖಲಿಸಿದ್ದ ಎರಡು ಮತ್ತು ಜಾರಿ ನಿರ್ದೇಶನದ ಒಂದು ಪ್ರಕರಣದಲ್ಲಿ ಹೈಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಇದೀಗ ಸಿಬಿಐ ದಾಖಲಿಸಿರುವ ಮೂರನೇ ಪ್ರಕರಣದಲ್ಲಿಯೂ ಜಾಮೀನು ಮಂಜೂರಾಗಿರುವುದರಿಂದ ಮನ್ಸೂರ್ ಖಾನ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ವಿಚಾರಣೆ ವೇಳೆ ಮನ್ಸೂರ್ ಖಾನ್‌ಗೆ ಜಾಮೀನು ಮಂಜೂರು ಮಾಡುವುದನ್ನು ಆಕ್ಷೇಪಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್, ಐಎಂಎ ಪ್ರಕರಣದ ತನಿಖೆಯನ್ನು ಮುಖ್ಯ ನ್ಯಾಯಮೂರ್ತಿ ಓಕ ಅವರ ನೇತೃತ್ವದ ವಿಭಾಗೀಯ ಪೀಠ ಮೇಲ್ವಿಚಾರಣೆ ನಡೆಸುತ್ತಿದೆ. ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲು ಸಿಬಿಐ ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲಿಯವರೆಗೂ ಮನ್ಸೂರ್ ಖಾನ್ ನ್ಯಾಯಾಂಗ ಬಂಧನದಲ್ಲೇ ಇರವುದು ಸೂಕ್ತ. ಆತನಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರ ವಿರುದ್ಧ ದಾಖಲಾಗಿರುವ ಇತರೆ ಪ್ರಕರಣಗಳಲ್ಲಿ ಈಗಾಗಲೇ ಹೈಕೋರ್ಟ್ ಜಾಮೀನು ನೀಡಿದೆ. ಮನ್ಸೂರ್ ಖಾನ್‌ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಜಾಮೀನು ನೀಡದಿರುವುದು ಸರಿಯೇ ಎಂದಿತು. ಸಿಬಿಐ ಪರ ವಕೀಲರು, ಪ್ರಕರಣ ಕುರಿತು ಮನ್ಸೂರ್ ಖಾನ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ಬಾಕಿಯಿದೆ ಎಂದು ತಿಳಿಸಿದರು. ಹೇಳಿಕೆ ಪರಿಗಣಿಸಿದ ಪೀಠ, ಫೆ. 12ರಿಂದ ಜಾಮೀನು ಮಂಜೂರಾತಿ ಆದೇಶ ಜಾರಿಗೆ ಬರಲಿದೆ. ಅಷ್ಟರೊಳಗೆ ಮನ್ಸೂರ್ ಖಾನ್ ಹೇಳಿಕೆ ಪಡೆದುಕೊಳ್ಳಿ ಎಂದು ಸಿಬಿಐಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ABOUT THE AUTHOR

...view details